Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದಿಯರ ಕೂಡ ಕಳುಹಿಸಿದರು. ಇವರು ಬಂದು - ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡುವವನಲ್ಲ ಎಂದು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಫರಿಸಾಯರು ಯೇಸುವನ್ನು ವಂಚಿಸುವುದಕ್ಕೆ ಕೆಲವರನ್ನು ಕಳುಹಿಸಿದರು. ಅವರಲ್ಲಿ ಕೆಲವರು ಫರಿಸಾಯರ ಹಿಂಬಾಲಕರಾಗಿದ್ದರು. ಇನ್ನು ಕೆಲವರು ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವರಾಗಿದ್ದರು. ಈ ಜನರು, “ಬೋಧಕನೇ, ನೀನು ಯಥಾರ್ಥವಂತನೆಂದು ನಾವು ಬಲ್ಲೆವು. ನೀನು ದೇವರ ಮಾರ್ಗದ ಕುರಿತು ಸತ್ಯವನ್ನೇ ಬೋಧಿಸುವೆ ಎಂಬುದು ನಮಗೆ ಗೊತ್ತಿದೆ. ಬೇರೆಯವರು ನಿನ್ನ ವಿಷಯವಾಗಿ ಏನೇ ಯೋಚಿಸಿದರೂ ನೀನು ಹೆದರುವುದಿಲ್ಲ. ನೀನು ಮುಖದಾಕ್ಷಿಣ್ಯ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರು ತಮ್ಮ ಶಿಷ್ಯರನ್ನು ಹೆರೋದ್ಯರೊಂದಿಗೆ ಯೇಸುವಿನ ಬಳಿಗೆ ಕಳುಹಿಸಿ, “ಬೋಧಕರೇ, ನೀವು ಸತ್ಯವಂತರು, ದೇವರ ಮಾರ್ಗವನ್ನು ಸತ್ಯದಿಂದಲೇ ಬೋಧಿಸುವವರು, ನೀವು ಯಾರನ್ನೂ ಲಕ್ಷ್ಯ ಮಾಡುವವರಲ್ಲ, ನೀವು ಮುಖದಾಕ್ಷಿಣ್ಯ ಮಾಡುವವರೂ ಅಲ್ಲ ಎಂದು ನಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅನಿ ಅಪ್ನಾಚ್ಯಾ ಉಲ್ಲ್ಯಾ ಶಿಸಾಕ್ನಿ ಅನಿ ಹೆರೊದಾಚ್ಯಾ ಪಕ್ಷಾಚ್ಯಾ ಉಲ್ಲ್ಯಾ ಲೊಕಾಕ್ನಿ ಶಿಕ್ವುನ್ ಜೆಜುಕ್ಡೆ ಧಾಡುನ್ ದಿಲ್ಯಾನಿ. ತೆನಿ ಜಾವ್ನ್ ಜೆಜುಕ್, “ಗುರುಜಿ, ತಿಯಾ ಕೊನಾಚ್ಯಾ ಮೊಟೆಪಾನಾಕ್-ಗಿನಾಕ್ ಲೆಕ್ಕ್ ಕರಿನಸ್ತಾನಾ ದೆವಾಚ್ಯಾ ಮನಾ ಸರ್ಕೆ ಕಾಯ್ ಖರೆ ಹಾಯ್ ತೆಚ್ ಲೊಕಾಕ್ನಿ ಶಿಕ್ವುತೆ ಅನಿ ಸಾಂಗ್ತೆ ತೆ ಅಮ್ಕಾ ಗೊತ್ತ್ ಹಾಯ್. ಕಶ್ಯಾಕ್ ಮಟ್ಲ್ಯಾರ್ ತಿಯಾ ಕೊನಾಕ್ಬಿ ಭಿಯಾತಲೊ ಮಾನುಸ್ ನ್ಹಯ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:16
36 ತಿಳಿವುಗಳ ಹೋಲಿಕೆ  

ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು.


ಗೂಢಚಾರರು, “ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.


ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು.


ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು.


ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.


ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.


ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.


ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.


ಆದರೆ ಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು ನನಗೇನನ್ನೂ ತಿಳಿಸಿಕೊಡಲಿಲ್ಲ.


ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.


ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ಅದಕ್ಕೆ ಯೇಸು, “ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ” ಅಂದಾಗ ಸೀಮೋನನು, “ಬೋಧಕನೇ, ಹೇಳು” ಅಂದನು.


ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು.


ಕೂಡಲೇ ಅವನು ಯೇಸುವಿನ ಬಳಿಗೆ ಬಂದು, “ಗುರುವೇ ನಮಸ್ಕಾರ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.


ಆತನು, “ನೀವು ಪಟ್ಟಣದೊಳಕ್ಕೆ ನಾನು ಸೂಚಿಸಿದವನ ಬಳಿಗೆ ಹೋಗಿ ಅವನಿಗೆ, ‘ನನ್ನ ಕಾಲ ಸಮೀಪವಾಯಿತು, ನಾನು ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬ ಮಾಡುತ್ತೇನೆ’ ಎಂಬುದಾಗಿ ಗುರುವು ಹೇಳುತ್ತಿದ್ದಾನೆ ಎಂದು ಹೇಳಿರಿ” ಅಂದನು.


ಅದರಂತೆ ಎರಡನೆಯವನೂ ಮೂರನೆಯವನೂ ಹಾಗೆಯೇ ಏಳನೆಯವನ ವರೆಗೂ ಮಾಡಿದರು.


ಇವರು ಆತನಿಗೆ, “ಬೋಧಕನೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’


“ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮನಿಯಮ ಉಪದೇಶದಲ್ಲಿ ಪಕ್ಷಪಾತ ತೋರಿಸಿದ್ದರಿಂದ ನಾನಂತೂ ನಿಮ್ಮನ್ನು ಎಲ್ಲಾ ಜನರ ಮುಂದೆ ಅವಮಾನ ಹೊಂದುವಂತೆ ಅವರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.”


ಅವರ ಬಾಯಲ್ಲಿ ಸತ್ಯಬೋಧನೆಯು ನೆಲೆಸಿತ್ತು, ಅವರ ತುಟಿಗಳಲ್ಲಿ ಅಪವಾದದ ಮಾತುಗಳು ಬರಲಿಲ್ಲ. ಅವರು ಶಾಂತಿಯಿಂದಲೂ, ಸದ್ಧರ್ಮದಿಂದಲೂ ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಬಹು ಜನರನ್ನು ಪಾಪದ ಕಡೆಯಿಂದ ತಿರುಗಿಸಿದರು.


ನೆರೆಯವನೊಂದಿಗೆ ವಂಚನೆಯ ಸವಿನುಡಿಗಳನ್ನು ಆಡುವವನು, ಅವನ ಹೆಜ್ಜೆಗೆ ಬಲೆಯನ್ನೊಡ್ಡುವನು.


ಅವನ ಮಾತು ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.


ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.


ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.


ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.


ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.


ಆ ಮೇಲೆ ಅವರು ಯೇಸುವನ್ನು ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ, ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು