Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇವರು ಆತನಿಗೆ, “ಬೋಧಕನೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವರು ಸ್ವಾಮಿಯನ್ನು ಹೀಗೆಂದು ಪ್ರಶ್ನಿಸಿದರು: “ಬೋಧಕರೇ, ಮಕ್ಕಳಿಲ್ಲದೆ ಒಬ್ಬನು ಸತ್ತುಹೋದರೆ ಅವನ ಹೆಂಡತಿಯನ್ನು ತಮ್ಮನು ಮದುವೆಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,” ಎಂದು ಮೋಶೆ ಹೇಳಿದ್ದಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇವರು ಆತನಿಗೆ ಪ್ರಶ್ನೆಮಾಡಿದ್ದೇನಂದರೆ - ಬೋಧಕನೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಬೋಧಕನೇ, ವಿವಾಹಿತನೊಬ್ಬನು ಮಕ್ಕಳನ್ನು ಪಡೆಯದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗಾಗಿ ಸಂತಾನ ಪಡೆಯಬೇಕೆಂದು ಮೋಶೆ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ವಿಧವೆಯನ್ನು ಮದುವೆಯಾಗಿ ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತೆನಿ ಜೆಜುಕ್,“ಗುರುಜಿ, ಮೊಯ್ಜೆನ್ ಎಕ್ ಮಾನುಸ್ ಪೊರಾ ನಸ್ತಾನಾ ಮರ್ಲ್ಯಾರ್ ತೆಚ್ಯಾ ಭಾವಾನ್ ತೆಚ್ಯಾ ಬಾಯ್ಕೊಕ್ಡೆ ಲಗಿನ್ ಕರುನ್ ಘೆವ್ಚೆ. ಅನಿ ತೆಂಕಾ ಜಲಮಲ್ಲಿ ಪೊರಾ ತ್ಯಾ ಮರಲ್ಲ್ಯಾ ಮಾನ್ಸಾಚಿ ಪೊರಾ ಮನುನ್ ಲೆಕ್ಕ್, ಮನುನ್ ಸಾಂಗ್ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:24
14 ತಿಳಿವುಗಳ ಹೋಲಿಕೆ  

“ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.


ಆತನನ್ನು ಪ್ರಶ್ನೆಮಾಡಿದ್ದೇನಂದರೆ, “ಬೋಧಕನೇ, ‘ಅಣ್ಣನಾದವನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಆಕೆಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು’ ಮೋಶೆಯು ನಮಗಾಗಿ ಬರೆದಿಟ್ಟಿದ್ದಾನಲ್ಲವೇ.


“ಇದಲ್ಲದೆ ನೀವು ನನ್ನನ್ನು ‘ಕರ್ತನೇ, ಕರ್ತನೇ’ ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ?


“ಗುರುವೇ, ಧರ್ಮಶಾಸ್ತ್ರದಲ್ಲಿ ಯಾವ ಆಜ್ಞೆ ಮುಖ್ಯವಾದದ್ದು” ಎಂದು ಆತನನ್ನು ಕೇಳಿದ್ದಕ್ಕೆ


ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.


“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.


ಆಕೆಯು, “ನನ್ನ ಮಕ್ಕಳೇ, ನೀವು ನನ್ನೊಡನೆ ಬರುವುದೇಕೆ? ಹಿಂದಿರುಗಿ ಹೋಗಿರಿ. ನಿಮಗೆ ಗಂಡಂದಿರನ್ನು ಕೊಡುವುದಕ್ಕೆ ನನ್ನ ಗರ್ಭದಲ್ಲಿ ಬೇರೆ ಮಕ್ಕಳಿಲ್ಲವಲ್ಲಾ.


ಆ ಮೇಲೆ ಯೆಹೂದನು ಒಂದು ವೇಳೆ ಶೇಲಹನು ತನ್ನ ಅಣ್ಣಂದಿರಂತೆಯೇ ಸತ್ತಾನೆಂದು ಯೋಚಿಸಿ ತನ್ನ ಸೊಸೆಯಾದ ತಾಮಾರಳಿಗೆ, “ನನ್ನ ಮಗನಾದ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿರು” ಎಂದು ಹೇಳಿದನು. ಅವಳು ತಂದೆಯ ಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.


ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅಣ್ಣನ ಹೆಂಡತಿಯನ್ನು ಮದುವೆಮಾಡಿಕೊಂಡು ಮೈದುನ ಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು” ಎಂದನು.


ಈ ರಾತ್ರಿ ಇಲ್ಲೇ ಇರು; ನಾಳೆ ಅವನು ಮೈದುನಧರ್ಮವನ್ನು ನೆರವೇರಿಸಿದರೆ ಸರಿ; ಇಲ್ಲವಾದರೆ ಯೆಹೋವನಾಣೆ, ನಾನೇ ಅದನ್ನು ನೆರವೇರಿಸುವೆನು. ಬೆಳಗಾಗುವ ತನಕ ಇಲ್ಲೇ ಮಲಗಿಕೋ” ಎಂದು ಹೇಳಿದನು.


ಆಗ ಬೋವಜನು “ನೀನು ನವೊಮಿಯಿಂದ ಆ ಹೊಲವನ್ನು ತೆಗೆದುಕೊಳ್ಳುವ ದಿನದಲ್ಲಿ, ಹೊಲದ ಖಾತೆಯೂ ಆಕೆಯ ಸತ್ತುಹೋದ ಮಗನ ಹೆಸರಿನಲ್ಲೇ ಉಳಿಯುದಿರುವಂತೆ, ಅವನ ಹೆಂಡತಿ ಮೋವಾಬ್ಯಳಾದ ರೂತಳನ್ನೂ ತೆಗೆದುಕೊಳ್ಳಬೇಕು” ಎಂದು ತಿಳಿಸಿದನು.


ಆದರೆ ನಮ್ಮಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಆಗಿ ತೀರಿಹೋದನು. ಅವನಿಗೆ ಮಕ್ಕಳಿಲ್ಲದ ಕಾರಣ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು;


ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು