Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಅವರು ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಪುನರುತ್ಥಾನ ಹೊಂದಿದ ಮೇಲೆ ಜನರು ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಸ್ವರ್ಗದ ದೇವದೂತರಂತೆ ಅವರು ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವದೂ ಇಲ್ಲ, ಮಾಡಿಕೊಡುವದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಸ್ತ್ರೀಯರು ಮತ್ತು ಪುರುಷರು ಪುನರುತ್ಥಾನ ಹೊಂದಿದ ಮೇಲೆ ಮದುವೆ ಮಾಡಿಕೊಳ್ಳುವುದಿಲ್ಲ. ಅವರೆಲ್ಲರೂ ಪರಲೋಕದ ದೇವದೂತರಂತೆ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಏಕೆಂದರೆ ಪುನರುತ್ಥಾನದ ಜೀವನದಲ್ಲಿ ಅವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಮರ್‍ನಾತ್ನಾ ಝಿತ್ತೆ ಹೊವ್ನ್ ಉಟುನ್ ಯೆಲ್ಲ್ಯಾ ತನ್ನಾ ತೆನಿ ಸರ್‍ಗಾತ್ ದೆವಾಚ್ಯಾ ದುತಾ ಸರ್ಕೆ ಹೊತ್ಯಾತ್, ಅನಿ ಲಗಿನ್ ಕರುನ್ ಘೆಯ್‍ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:30
14 ತಿಳಿವುಗಳ ಹೋಲಿಕೆ  

ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು.


ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.


ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು.


ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ ಅಂದನು.


ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೆ ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನ ಮಾರ್ಗಗಳಲ್ಲಿ ನಡೆದು, ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ನೀಡುವೆ; ನನ್ನ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು.


ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು