Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅರಸನು ತಿರುಗಿ ಬೇರೆ ಆಳುಗಳನ್ನು ಕರೆದು, ‘ನೀವು ಊಟಕ್ಕೆ ಆಹ್ವಾನಿತರ ಬಳಿಗೆ ಹೋಗಿ ಇಗೋ, ಔತಣ ಸಿದ್ಧವಾಗಿದೆ; ನನ್ನ ಎತ್ತುಗಳನ್ನೂ, ಕೊಬ್ಬಿದ ಹೋರಿಗಳನ್ನೂ ವಧಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಔತಣಕ್ಕೆ ಬನ್ನಿರಿ’ ಎಂಬುದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪುನಃ ಬೇರೆ ಸೇವಕರನ್ನು ಅಟ್ಟಿದ. ‘ಔತಣ ಸಿದ್ಧವಾಗಿದೆ. ಕೊಬ್ಬಿನ ಮಾಂಸದ ಅಡಿಗೆಯನ್ನು ಮಾಡಿಸಿದ್ದೇನೆ. ಎಲ್ಲವೂ ಅಣಿಯಾಗಿದೆ. ಉತ್ಸವಕ್ಕೆ ಬೇಗ ಬನ್ನಿ’ ಎಂದು ಆಹ್ವಾನಿತರಿಗೆ ತಿಳಿಸುವಂತೆ ಹೇಳಿಕಳುಹಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತಿರಿಗಿ ಬೇರೆ ಆಳುಗಳನ್ನು ಕರೆದು - ನೀವು ಊಟಕ್ಕೆ ಹೇಳಿಸಿಕೊಂಡವರ ಬಳಿಗೆ ಹೋಗಿ - ಇಗೋ, ಅಡಿಗೆ ಸಿದ್ಧವಾಗಿದೆ; ನನ್ನ ಹೋರಿಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಯಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಊಟಕ್ಕೆ ಬನ್ನಿರೆಂಬದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಆಮೇಲೆ ರಾಜನು ಇನ್ನೂ ಕೆಲವು ಸೇವಕರನ್ನು ಕರೆದು, ‘ಈ ಜನರನ್ನು ನಾನು ಆಗಲೇ ಆಹ್ವಾನಿಸಿದ್ದೇನೆ. ಆದ್ದರಿಂದ ಈಗ ಔತಣವು ಸಿದ್ಧವಾಗಿದೆ. ಅಡಿಗೆಗಾಗಿ ಕೊಬ್ಬಿದ ಎತ್ತುಗಳನ್ನು ಮತ್ತು ಕರುಗಳನ್ನು ಕೊಯ್ಸಿದ್ದೇನೆ. ಎಲ್ಲವೂ ಸಿದ್ಧವಾಗಿದೆ. ಮದುವೆ ಔತಣಕ್ಕೆ ಬನ್ನಿ ಎಂದು ಅವರಿಗೆ ತಿಳಿಸಿ’ ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಅವನು ಪುನಃ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ, ‘ಇಗೋ ಔತಣವು ಸಿದ್ಧವಾಗಿದೆ. ಶ್ರೇಷ್ಠ ಔತಣ ಮಾಡಿಸಿದ್ದೇನೆ: ಎಲ್ಲವೂ ಸಿದ್ಧವಾಗಿವೆ. ಮದುವೆಗೆ ಬನ್ನಿರಿ ಎಂದು ಆಹ್ವಾನಿತರಿಗೆ ಹೇಳಿರಿ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತಸೆಮನುನ್ ಅನಿ ಎಗ್ದಾ ತ್ಯಾ ರಾಜಾನ್ ಅಪ್ನಾಚ್ಯಾ ಆಳಾಕ್ನಿ, “ಜಾವಾ ಅನಿ ತ್ಯಾ ಸೈರ್‍ಯಾಕ್ನಿ ಬಕ್ರಿ ಅನಿ ಪಾಡ್ಕಾ ಕಾತ್ರುನ್ ಗರ್‍ದಿಚೆ ಜೆವಾನ್ ರಾಂದುನ್ ತಯಾರ್ ಕರುನ್ ಹೊಲಾ. ಜೆವ್ನಾಕ್ ಯೆವಾ ಮನುನ್ ಸಾಂಗಾ.” ಮನುನ್ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:4
18 ತಿಳಿವುಗಳ ಹೋಲಿಕೆ  

ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.


ಆ ಯಜಮಾನನು ಪುನಃ ಮೊದಲಿನವರಿಗಿಂತ ಹೆಚ್ಚು ಮಂದಿ ಆಳುಗಳನ್ನು ಕಳುಹಿಸಿದನು, ಅವರು ಅವರಿಗೂ ಹಾಗೆಯೇ ಮಾಡಿದರು.


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?


ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.


ಊಟವು ಸಿದ್ಧವಾದಾಗ, ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು, ‘ಈಗ ಔತಣವು ಸಿದ್ಧವಾಗಿದೆ ಊಟಕ್ಕೆ ಬರಬೇಕು’ ಎಂದು ಹೇಳುವುದಕ್ಕೆ ತನ್ನ ಆಳನ್ನು ಕಳುಹಿಸಿದನು.


ಆಗ ತನ್ನ ಆಳುಗಳಿಗೆ, ‘ಮದುವೆಯ ಔತಣವು ಸಿದ್ಧವಾಗಿದೆ ಸರಿ, ಆದರೆ ಆಹ್ವಾನಿತರು ಯೋಗ್ಯರಾಗಿರಲಿಲ್ಲ.


ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.


ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಬೇಗನೆ ಮರೆತು, ನಿನ್ನ ಮಾತಿಗೆ ಕಿವಿಗೊಡದೆ ಹಠಹಿಡಿದು, ತಮಗೊಬ್ಬ ನಾಯಕನನ್ನು ನೇಮಿಸಿಕೊಂಡು, ಮೊದಲಿನಂತೆ ದಾಸರಾಗಿರುವುದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ಆದರೆ ನೀನಾದರೋ ಪಾಪಗಳನ್ನು ಕ್ಷಮಿಸುವವನೂ, ಕನಿಕರ ದಯೆಗಳುಳ್ಳವನೂ, ದೀರ್ಘಶಾಂತನೂ, ಕೃಪಾಳುವೂ ಆಗಿರುವ ದೇವರಾಗಿರುವುದರಿಂದ ನೀನು ಅವರ ಕೈಬಿಡಲಿಲ್ಲ.


ದ್ವೇಷವಿರುವಲ್ಲಿ ಮೃಷ್ಟಾನ್ನಕ್ಕಿಂತಲೂ, ಪ್ರೇಮವಿರುವಲ್ಲಿ ಸೊಪ್ಪಿನ ಊಟವೇ ಉತ್ತಮ.


ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು