Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 22:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 “ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?” ಎಂದು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 “ಅಭಿಷಿಕ್ತನಾದ ಲೋಕೋದ್ಧಾರಕನ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಆತ ಯಾರ ಮಗ?” ಅದಕ್ಕವರು, “ದಾವೀದನ ಪುತ್ರ” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು? ಎಂದು ಪ್ರಶ್ನೆಹಾಕಿದ್ದಕ್ಕೆ ಅವರು ಆತನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 “ಕ್ರಿಸ್ತನ ವಿಷಯವಾಗಿ ನಿಮ್ಮ ಆಲೋಚನೆಯೇನು? ಆತನು ಯಾರ ಮಗನು?” ಎಂದು ಅವರನ್ನು ಕೇಳಿದನು. ಫರಿಸಾಯರು, “ಕ್ರಿಸ್ತನು ದಾವೀದನ ಮಗನಾಗಿದ್ದಾನೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 “ಕ್ರಿಸ್ತನ ವಿಷಯವಾಗಿ ನಿಮ್ಮ ಅಭಿಪ್ರಾಯವೇನು? ಆತನು ಯಾರ ಪುತ್ರನು?” ಎಂದು ಕೇಳಿದ್ದಕ್ಕೆ ಅವರು ಯೇಸುವಿಗೆ, “ದಾವೀದನ ಪುತ್ರನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 “ಕ್ರಿಸ್ತಾಚ್ಯಾ ವಿಶಯಾತ್ ತುಮಿ ಕಾಯ್ ಮನ್ತ್ಯಾಶಿ? ತೊ ಕೊನಾಚ್ಯಾ ಘರಾನ್ಯಾಚೊ?” ಮನುನ್ ಇಚಾರ್‍ಲ್ಯಾನ್. ತೆನಿ “ತೊ ದಾವಿದಾಚ್ಯಾ ಘರಾನ್ಯಾಚೊ” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 22:42
24 ತಿಳಿವುಗಳ ಹೋಲಿಕೆ  

ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.


ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ.


“ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.


ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು.


ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.


ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.


ಆಗ ದೋಣಿಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು.


ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.


ಅವರು ಆತನಿಗೆ, “ದಾವೀದನ ಮಗನು” ಎಂದು ಹೇಳಿದರು. ಅದಕ್ಕೆ ಆತನು, “ಹಾಗಾದರೆ, ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ, ಅದು ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು