Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮತ್ತು ‘ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಒಬ್ಬನು ಬಲಿಪೀಠದ ಮೇಲೆ ಆಣೆಯಿಟ್ಟರೆ ಅದಕ್ಕೇನೂ ಬದ್ಧನಲ್ಲ. ಬಲಿಪೀಠದ ಮೇಲಿರುವ ಕಾಣಿಕೆಗಳ ಮೇಲೆ ಆಣೆಯಿಟ್ಟರೋ, ಅದನ್ನು ಅವನು ನಡೆಸಿಯೇ ತೀರಬೇಕು ಎನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು ಎಂದು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಒಬ್ಬನು ಯಜ್ಞವೇದಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದಕ್ಕೇನೂ ಬೆಲೆಯಿಲ್ಲ ಎನ್ನುತ್ತೀರಿ. ಆದರೆ ಒಬ್ಬನು ಯಜ್ಞವೇದಿಕೆಯ ಮೇಲಿರುವ ಕಾಣಿಕೆಯ ಮೇಲೆ ವಾಗ್ದಾನ ಮಾಡಿದರೆ ಅವನು ಅದನ್ನು ಈಡೇರಿಸಲೇಬೇಕು ಎಂದು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ‘ಯಾರಾದರೂ ಬಲಿಪೀಠದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆ ಮೇಲೆ ಆಣೆಯಿಟ್ಟರೆ ಅವನು ಅದನ್ನು ಕೊಟ್ಟುಬಿಡಬೇಕು,’ ಎನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅನಿ ಅಲ್ತಾರಿಚ್ಯಾ ನಾವಾನ್ ಆನ್ ಘಾಲುನ್ ಮಾಗುನ್ ಘೆಟಲ್ಲೆ ಪುರಾ ಕರುಚೆ ಮನುನ್ ನಾ, ಖರೆ ಅಲ್ತಾರಿ ವರ್‍ತಿ ಥವಲ್ಲ್ಯಾ ಖಲ್ಯಾಬಿ ದೆನ್ಗಿಚ್ಯಾ ವರ್‍ತಿ ಆನ್ ಘಾಲುನ್ ಮಾಗುನ್ ಘೆಟಲ್ಲೆ ರ್‍ಹಾಲ್ಯಾರ್ ತಿ ಮಾಗ್ನಿ ಪುರಾ ಕರುಚಿ ಮನುನ್ಬಿ ತುಮಿ ಶಿಕ್ವುತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:18
7 ತಿಳಿವುಗಳ ಹೋಲಿಕೆ  

“ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.


ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ?


ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪ್ರತಿಷ್ಠೆ ಮಾಡುವ ಯಜ್ಞವೇದಿಯೋ?


ಯಾವನಾದರೂ ಯೆಹೋವನಿಗೆ ಹರಕೆ ಮಾಡಿದರೆ ಇಲ್ಲವೆ ತಾನು ಅಶುದ್ಧವಾದುದನ್ನು ಮುಟ್ಟದೆ ಇರುವೆನೆಂದು ಆಣೆಯಿಟ್ಟುಕೊಂಡರೆ ಅವನು ತನ್ನ ಮಾತನ್ನು ಮೀರದೆ ಹೇಳಿದಂತೆಯೇ ನೆರವೇರಿಸಬೇಕು.


ನೆರೆಯವನಿಗೆ ವಿರೋಧವಾಗಿ ಪಾಪ ಮಾಡಿ, ಶಾಪಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣ ಮಾಡುವಾಗ, ಅವನು ಈ ಆಲಯಕ್ಕೆ ಬಂದು ನಿನ್ನ ಯಜ್ಞವೇದಿಯ ಮುಂದೆ ನಿಂತು ಪ್ರಮಾಣ ಮಾಡಿದರೆ,


ನೀವಾದರೋ ‘ಒಬ್ಬನು ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ನೋಡಿ, ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ಕೊರ್ಬಾನ್ (ಅಂದರೆ ದೇವರಿಗೆ ಮುಡಿಪು) ಮಾಡಿದ್ದೇನೆ’ ಎಂದು ಹೇಳುವುದಾದರೆ


ಸುನ್ನತಿ ಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ, ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವುದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರುಗಿ ಪ್ರಮಾಣವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು