Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮತ್ತು ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿ ವಾಸಮಾಡುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವಾಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಮಾತ್ರವಲ್ಲ, ಅದರಲ್ಲಿ ನೆಲೆಸುವ ದೇವರ ಮೇಲೂ ಆಣೆಯಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ ಅದರಲ್ಲಿ ವಾಸಮಾಡುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವಾಲಯದ ಮೇಲೆ ವಾಗ್ದಾನ ಮಾಡುವವನು ನಿಜವಾಗಿಯೂ ದೇವಾಲಯದ ಮತ್ತು ಅದರೊಳಗೆ ವಾಸವಾಗಿರುವಾತನ ಮೇಲೆ ವಾಗ್ದಾನ ಮಾಡಿದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದೇವಾಲಯದ ಮೇಲೆ ಆಣೆಯಿಡುವವನು ಅದರ ಮೇಲೆಯೂ ಅದರಲ್ಲಿ ವಾಸಿಸುವ ದೇವರ ಮೇಲೆಯೂ ಆಣೆಯಿಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅನಿ ಜೆ ಕೊನ್ ದೆವಾಚ್ಯಾ ಗುಡಿಚ್ಯಾ ನಾವಾನ್ ಆನ್ ಘಾಲ್ತಾ, ತೊ ತ್ಯಾ ಗುಡಿತ್ ವಸ್ತಿ ಕರ್‍ತಲ್ಯಾ ದೆವಾಚ್ಯಾ ನಾವಾನ್‍ಬಿ ಆನ್ ಘಾಲ್ತಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:21
9 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ.


ನಾನು ನಿನಗೋಸ್ಕರ ಒಂದು ಮಂದಿರವನ್ನು ಕಟ್ಟಿಸಿದ್ದೇನೆ. ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಿರಲಿ” ಎಂದು ಪ್ರಾರ್ಥನೆಮಾಡಿದನು.


ಆದರೆ ನಾನು ನಿನಗೋಸ್ಕರ ಒಂದು ಆಲಯವನ್ನು, ನೀನು ಶಾಶ್ವತವಾಗಿ ವಾಸಮಾಡತಕ್ಕ ಸ್ಥಳವಾಗಿರಲೆಂದು ನಾನು ಕಟ್ಟಿಸಿದ್ದೇನೆ” ಎಂದನು.


ದೇವರ ಸರ್ವಸಂಪೂರ್ಣತೆಯು ಕ್ರಿಸ್ತನ ದೇಹದಲ್ಲಿ ವಾಸಮಾಡುತ್ತಿದೆ,


ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.


ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು.


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?


ಹೀಗಿರುವುದರಿಂದ ಯಾವನಾದರೂ ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿರುವ ಎಲ್ಲದರ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು