Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಮರುಗ ಸೋಪು ಜೀರಿಗೆಗಳಲ್ಲಿ ಹತ್ತರಲ್ಲೊಂದು ಪಾಲುಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಗೌರವವಾದದ್ದನ್ನು, ಅಂದರೆ ನ್ಯಾಯವನ್ನೂ ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿರಿ. ಇವುಗಳನ್ನು ಮಾಡಬೇಕಾಗಿತ್ತು; ಅವುಗಳನ್ನೂ ಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮಲ್ಲಿರುವ ಪ್ರತಿಯೊಂದರಲ್ಲೂ ನಿಮ್ಮ ಪುದೀನ, ಸಬ್ಬಸ್ಸಿಗೆ ಸೊಪ್ಪು, ಜೀರಿಗೆ ಗಿಡಗಳಲ್ಲಿಯೂ ಸಹ ಹತ್ತರಲ್ಲೊಂದು ಪಾಲನ್ನು ದೇವರಿಗೆ ಕೊಡುತ್ತೀರಿ. ಆದರೆ ಧರ್ಮಶಾಸ್ತ್ರದ ಬೋಧನೆಗಳಲ್ಲಿ ನಿಜವಾಗಿಯೂ ಪ್ರಾಮುಖ್ಯವಾದ ಆಜ್ಞೆಗಳನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ಯಥಾರ್ಥತೆಯನ್ನೂ ನೀವು ತೊರೆದುಬಿಟ್ಟಿದ್ದೀರಿ. ಈ ಆಜ್ಞೆಗಳಿಗೆ ನೀವು ಮೊದಲು ವಿಧೇಯರಾಗಿ, ಈಗ ಮಾಡುತ್ತಿರುವಂಥ ಕಾರ್ಯಗಳನ್ನು ಮಾಡಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಪುದೀನ, ಸದಾಪು, ಜೀರಿಗೆಗಳ ದಶಮಭಾಗವನ್ನು ಸಲ್ಲಿಸುತ್ತೀರಿ. ಆದರೆ ನಿಯಮದ ನ್ಯಾಯನೀತಿ, ಕರುಣೆ, ನಂಬಿಕೆ ಎಂಬ ಈ ಪ್ರಮುಖವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗಳೊಂದಿಗೆ ಆ ಬೇರೆಯವುಗಳನ್ನು ಬಿಟ್ಟುಬಿಡದೆ ಮಾಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಫಾರಿಜೆವಾನು ಅನಿ ಶಾಸ್ತರಾ ಶಿಕ್ವುತಲ್ಯಾನು ಮಿಯಾ ತುಮ್ಚಿ ಗತ್ ಕಾಯ್ ಸಾಂಗು! ಕುಸ್ಡೆ ತುಮಿ! ತುಮಿ ಪುದಿನಾ, ಸಬ್ಜಾಚೊಪಾಲೊ, ಅನಿ ಜಿರೆ ಅಸ್ಲ್ಯಾ ಬಾರಿ-ಬಾರಿಕ್ಲ್ಯಾ ಝಾಡಾಂಚೊ ಸೈತ್ ಧಾ ತ್ಲೊ ಎಕ್ ವಾಟೊ ದೆವಾಕ್ ಮನುನ್ ದಿತ್ಯಾಶಿ, ಖರೆ ಶಾಸ್ತರಾನಿತ್ಲ್ಯಾ ಗರ್ಜೆಚಿ ಮಟ್ಲ್ಯಾರ್, ನ್ಯಾಯ್‍ನಿತ್, ದಯಾ, ಅನಿ ಪ್ರಾಮಾನಿಕ್‍ಪಾನಾಚ್ಯಾ ಶಿಕಾಪಾಕ್ನಿ ತುಮಿ ಖಾಲ್ತಿ ಹೊವ್ನ್ ಚಲಿನ್ಯಾಶಿ. ಹ್ಯಾ ಶಾಸ್ತರಾಂಚ್ಯಾ ವಾಂಗ್ಡಾ ಹ್ಯಾ ಶಾಸ್ತರಾಂಚ್ಯಾ ತಕ್ ಚಲ್ತಲೆಬಿ ತುಮಿ ಶಿಕುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:23
16 ತಿಳಿವುಗಳ ಹೋಲಿಕೆ  

“ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು.


ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?


ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.


ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.


ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.


ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.


“‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.


ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು.


‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡುತ್ತಿರಲಿಲ್ಲಾ.


ಅಂತು ಭೂಮಿಯನ್ನು ಹಸನು ಮಾಡಿದ ಮೇಲೆ ಅಗಸೆಯನ್ನು, ಜೀರಿಗೆಯನ್ನು ಬಿತ್ತಿ, ಗೋದಿಯನ್ನು ಸಾಲು ಸಾಲಾಗಿ ತಕ್ಕ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೆ?


ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ” ಎಂದು ಹೇಳುತ್ತಾನೆ.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು