Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಕುರುಡನಾದ ಫರಿಸಾಯನೇ, ಮೊದಲು ಪಾತ್ರೆ ಬಟ್ಟಲುಗಳ ಒಳಭಾಗವನ್ನು ಶುಚಿಮಾಡು, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಕುರುಡ ಫರಿಸಾಯನೇ, ಮೊತ್ತಮೊದಲು ತಟ್ಟೆಲೋಟಗಳ ಒಳಭಾಗವನ್ನು ತೊಳೆ, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಕುರುಡನಾದ ಫರಿಸಾಯನೇ, ಮೊದಲು ಪಂಚಪಾತ್ರೆ ಬಟ್ಟಲುಗಳ ಒಳಭಾಗವನ್ನು ಶುಚಿಮಾಡು. ಆಗ ಅವುಗಳ ಹೊರಭಾಗವೂ ಶುಚಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಫರಿಸಾಯರೇ, ನೀವು ಕುರುಡರು! ಮೊದಲು ಬಟ್ಟಲಿನ ಒಳಭಾಗವನ್ನು ಚೆನ್ನಾಗಿ ಶುಚಿಮಾಡಿರಿ. ಆಗ ಬಟ್ಟಲಿನ ಹೊರಭಾಗವು ನಿಜವಾಗಿಯೂ ಶುಚಿಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗವನ್ನು ಶುಚಿಮಾಡು. ಆಗ ಅವುಗಳ ಹೊರಭಾಗವೂ ಶುಚಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಫಾರಿಜೆವಾನು ಕುಡ್ಡ್ಯಾನು! ವಾಟ್ಕಿತ್ ಭುತ್ತುರ್ ಹೊತ್ತೆ ಅದ್ದಿ ಧುವ್ನ್ ಪವಿತ್ರ್ ಕರಾ ತನ್ನಾ ಭಾಯ್ಲೆಬಿ ಪವಿತ್ರ್ ಹೊತಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:26
12 ತಿಳಿವುಗಳ ಹೋಲಿಕೆ  

ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.


ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.


“ಮರ ಒಳ್ಳೆಯದಾದರೆ ಅದರ ಫಲವು ಒಳ್ಳೆಯದೆನ್ನಿರಿ. ಮರ ಕೆಟ್ಟದಾದರೆ ಅದರ ಫಲವು ಕೆಟ್ಟದು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವುದು.


“ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ?


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.


ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ವ್ಯಭಿಚಾರದ ನಡತೆಯನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲ ಬೇಕು?


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು.


ಮತ್ತು ಸಂತೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಇರುತ್ತಿರಲಿಲ್ಲ. ಬಹು ಸ್ವಚ್ಛವಾಗಿ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು.


ಆದರೆ ಕರ್ತನು ಅವನಿಗೆ, “ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು