Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ಒಳಗೆ ಕಪಟ ಮತ್ತು ಅಕ್ರಮದಿಂದ ತುಂಬಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಬಹಿರಂಗ ನೋಟಕ್ಕೆ ನೀವು ಸತ್ಪುರುಷರು. ಅಂತರಂಗದಲ್ಲಾದರೋ ಕಪಟ ಕಲ್ಮಶಗಳಿಂದ ತುಂಬಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಹಾಗೆಯೇ ನೀವು ಸಹ ಹೊರಗೆ ಜನರಿಗೆ ಸತ್ಪುರುಷರಂತೆ ಕಾಣಿಸಿಕೊಳ್ಳುತ್ತೀರಿ ಸರಿ, ಆದರೆ ಒಳಗೆ ಕಪಟದಿಂದಲೂ ಅನ್ಯಾಯದಿಂದಲೂ ತುಂಬಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನೀವು ಅದೇ ರೀತಿ ಇದ್ದೀರಿ. ನಿಮ್ಮನ್ನು ನೋಡಿದ ಜನರು ನಿಮ್ಮನ್ನು ಒಳ್ಳೆಯವರೆಂದು ಭಾವಿಸಿಕೊಳ್ಳುತ್ತಾರೆ. ಆದರೆ ನಿಮ್ಮ ಅಂತರಂಗವು ಕಪಟದಿಂದಲೂ ದುಷ್ಟತನದಿಂದಲೂ ತುಂಬಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅದರಂತೆಯೇ, ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ನೀವು ಒಳಗೆ ಕಪಟದಿಂದಲೂ ಅನ್ಯಾಯದಿಂದಲೂ ತುಂಬಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತುಮಿಬಿ ತಸೆಚ್ ಭಾಯ್ನಾ ಸಗ್ಳ್ಯಾಕ್ನಿ ಬರೆ ದಿಸ್ತ್ಯಾಶಿ, ಖರೆ ತುಮ್ಚ್ಯಾ ಭುತ್ತುರ್ ಕುಸ್ಡೆಪಾನ್ ಅನಿ ಪಾಪ್ ಭರಲ್ಲೆ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:28
13 ತಿಳಿವುಗಳ ಹೋಲಿಕೆ  

ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.


ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.


ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.


ತನ್ನ ಹಗೆಯನ್ನು ವಂಚನೆಯಿಂದ ಮರೆಮಾಚಿಕೊಂಡಿದ್ದರೂ, ಅವನ ಕೆಟ್ಟತನವು ಸಭೆಯಲ್ಲಿ ಬೈಲಾಗುವುದು.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ,


ಇದಲ್ಲದೆ ಉಳಿದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟತನದಿಂದ ವರ್ತಿಸಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು