Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 23:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ನೀವು ‘ಬೋಧಕರೆನ್ನಿಸಿಕೊಳ್ಳಬೇಡಿರಿ;’ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ನೀವು ಬೋಧಕರನ್ನಿಸಿಕೊಳ್ಳಬೇಡಿರಿ; ಒಬ್ಬನೇ ನಿಮ್ಮ ಬೋಧಕನು, ನೀವೆಲ್ಲರು ಸಹೋದರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಆದರೆ ನೀವು ಉಪದೇಶಕರೆನಿಸಿಕೊಳ್ಳಬೇಡಿ. ನೀವೆಲ್ಲರೂ ಸಹೋದರಸಹೋದರಿಯರು. ನಿಮಗೆ ಒಬ್ಬನೇ ಉಪದೇಶಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಆದರೆ ನೀವು, ‘ಬೋಧಕರು,’ ಎಂದು ಕರೆಯಿಸಿಕೊಳ್ಳಬೇಡಿರಿ. ಏಕೆಂದರೆ ನಿಮಗಿರುವ ಬೋಧಕರು ಒಬ್ಬರೇ ನೀವೆಲ್ಲರೂ ಸಹೋದರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತುಮಿ ಗುರು ಮನುನ್ ಕೊನಾಕ್‍ಬಿ ಬಲ್ವುತಲೆ ನಕ್ಕೊ. ತುಮಿ ಸಗ್ಳೆ ಜಾನಾ ಎಕಾಮೆಕಾಚೆ ಭಾವ್- ಭೆನಿಯಾ ಅನಿ ತುಮ್ಚೊ ಗುರು ಎಕ್ಲೊಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 23:8
34 ತಿಳಿವುಗಳ ಹೋಲಿಕೆ  

ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ.


ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.


ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.


ಮತ್ತು ‘ಗುರುವೆಂದು’ ಅನ್ನಿಸಿಕೊಳ್ಳಬೇಡಿರಿ; ಏಕೆಂದರೆ, ಕ್ರಿಸ್ತನೊಬ್ಬನೇ ನಿಮಗಿರುವ ಗುರುವು


ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.


ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.


ಆದರೆ ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು.


ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.


ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ.


ನಿಮ್ಮ ನಂಬಿಕೆಯ ವಿಷಯದಲ್ಲಿಯೂ ನಾವು ನಿಮ್ಮ ಮೇಲೆ ದೊರೆತನಮಾಡುವವರೆಂಬುದಾಗಿ ಅಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿರುವಂತೆ ನಿಮ್ಮ ಸಂತೋಷಕ್ಕೆ ನಾವು ಸಹಾಭಾಗಿಗಳಾಗಿದೇವಷ್ಟೇ.


ಕೂಡಲೇ ಅವನು ಯೇಸುವಿನ ಬಳಿಗೆ ಬಂದು, “ಗುರುವೇ ನಮಸ್ಕಾರ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.


ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?


ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ ‘ಗುರುಗಳೆನ್ನಿಸಿಕೊಳ್ಳುವುದು,’ ಇವುಗಳೇ ಅವರಿಗೆ ಇಷ್ಟ.


ಆಗ ಆತನನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ನಾನೋ?” ಎಂದು ಕೇಳಲು ಯೇಸು ಅವನಿಗೆ, “ನೀನೇ ಹಾಗೆ ಹೇಳಿದ್ದೀ” ಎಂದು ಹೇಳಿದನು.


ಆಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು; ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.


ಯೇಸು ಅವನನ್ನು, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ” ಎಂದು ಕೇಳಲು ಆ ಕುರುಡನು, “ಗುರುವೇ, ನನಗೆ ಕಣ್ಣಿನ ದೃಷ್ಟಿ ಬರುವಂತೆ ಮಾಡಬೇಕು” ಅಂದನು.


ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಪಿಸಿಕೊಂಡು ಆತನಿಗೆ, “ಗುರುವೇ, ಇಗೋ, ನೀನು ಶಾಪ ಕೊಟ್ಟ ಅಂಜೂರದ ಮರವು ಒಣಗಿಹೋಗಿದೆ” ಎಂದು ಹೇಳಿದ್ದಕ್ಕೆ


ಅದರಂತೆಯೇ ಯೂದನು ಅಲ್ಲಿಗೆ ಬಂದಕೂಡಲೇ ಅವನು ಯೇಸುವಿನ ಬಳಿಗೆ ಹೋಗಿ, “ಗುರುವೇ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.


ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು.


ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.


ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.


ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ “ಗುರುವೇ, ಯೊರ್ದನ್ ನದಿಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.” ಎಂದು ಹೇಳಲು


ಅಷ್ಟರೊಳಗೆ ಶಿಷ್ಯರು “ಗುರುವೇ, ಊಟಮಾಡು” ಎಂದು ಆತನನ್ನು ಕೇಳಿಕೊಂಡರು.


ಮತ್ತು ಸಮುದ್ರದ ಆಚೆಕಡೆಯಲ್ಲಿ ಆತನನ್ನು ಕಂಡು “ಗುರುವೇ, ಯಾವಾಗ ಇಲ್ಲಿಗೆ ಬಂದಿ?” ಎಂದು ಕೇಳಿದರು.


ಆತನ ಶಿಷ್ಯರು, “ಗುರುವೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಇವನೋ ಅಥವಾ ಇವನ ತಂದೆತಾಯಿಗಳೋ?” ಎಂದು ಆತನನ್ನು ಕೇಳಿದರು.


ಆತನ ಶಿಷ್ಯರು ಆತನಿಗೆ, “ಗುರುವೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?” ಎಂದರು.


ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು, ಆಕೆಯು ಅವನ ಕಡೆಗೆ ತಿರುಗಿ ಇಬ್ರಿಯ ಭಾಷೆಯಲ್ಲಿ ಆತನಿಗೆ, “ರಬ್ಬೂನಿ” ಎಂದಳು. ಹಾಗೆಂದರೆ ಗುರುವೇ ಎಂದರ್ಥ.


ಇನ್ನು ಮೇಲೆ ಅವನು ದಾಸನಂತಾಗಿರದೆ ದಾಸನಿಗಿಂತ ಮಿಗಿಲಾಗಿ ಉತ್ತಮವಾದ ಪ್ರಿಯ ಸಹೋದರನಂತಾಗಬೇಕು. ಅವನು ನನಗೆ ಬಹಳ ಪ್ರಿಯನಾಗಿರುವಲ್ಲಿ ನಿನಗೆ ಲೋಕದ ಪ್ರಕಾರವಾಗಿಯೂ, ಕರ್ತನ ಸಂಬಂಧದಲ್ಲಿಯೂ ಇನ್ನೂ ಹೆಚ್ಚು ಪ್ರಿಯನಾಗಿರುವನಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು