Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕೆ ಆತನ ಹತ್ತಿರಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ಮಹಾದೇವಾಲಯವನ್ನು ಬಿಟ್ಟುಹೋಗುತ್ತಿದ್ದರು. ಅದರ ಕಟ್ಟಡಗಳತ್ತ ಅವರ ಗಮನ ಸೆಳೆಯಲು ಶಿಷ್ಯರು ಅವರ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಮೇಲೆ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ಆತನಿಗೆ ದೇವಾಲಯದ ಕಟ್ಟಣಗಳನ್ನು ತೋರಿಸುವದಕ್ಕೆ ಹತ್ತರಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ದೇವಾಲಯದಿಂದ ಹೋಗುತ್ತಿದ್ದಾಗ ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸಲು ಆತನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ದೇವಾಲಯದಿಂದ ಹೊರಗೆ ಹೋದಾಗ ಅವರ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕಾಗಿ ಯೇಸುವಿನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು ದೆವಾಚ್ಯಾ ಗುಡಿಕ್ನಾ ಜಾವ್‍ಲಾಗಲ್ಲೊ ತನ್ನಾ ತೆಚ್ಯಾ ಶಿಸಾನಿ ಬಲ್ವುನ್ ದೆವಾಚ್ಯಾ ಗುಡಿಚ್ಯಾ ಭಾಂದ್ಪಾಕ್ಡೆ ಧ್ಯಾನ್ ದಿವ್ಕ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:1
11 ತಿಳಿವುಗಳ ಹೋಲಿಕೆ  

ಆಗ ಆತನು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನು ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು.


ಈಗಿಂದ, ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ’” ಅಂದನು.


ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿರ್ಜನ ದೇಶವನ್ನಾಗಿ ಮಾಡದಂತೆ ರಕ್ಷಿಸಿಕೊಳ್ಳಲು ಶಿಕ್ಷಣವನ್ನು ಹೊಂದು ಎಂದು ಹೇಳಿದ್ದಾನೆ.


ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳು ಹಿಡಿದವು. ನೀನು ಮೂರು ದಿನಗಳಲ್ಲಿ ಇದನ್ನು ಎಬ್ಬಿಸುವಿಯೋ?” ಎಂದರು.


ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.


ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ, ಯಾರೂ ಉಳಿಯದಂತೆ ಮಾಡಿ ಅವರಿಗೆ ಪುತ್ರ ಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!


ಅವನು ಸೆರಾಯನಿಗೆ ಹೀಗೆ ಹೇಳಿದನು, “ನೋಡು, ನೀನು ಬಾಬಿಲೋನಿಗೆ ಸೇರಿದ ಮೇಲೆ ಈ ಮಾತುಗಳನ್ನೆಲ್ಲಾ ಓದಿ ಹೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು