Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವುದನ್ನು ತೆಗೆದುಕೊಳ್ಳುವುದಕ್ಕೆ ಹೋಗದಿರಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮಾಳಿಗೆಯ ಮೇಲಿರುವವನು ಇಳಿದು ಮನೆಯಿಂದ ಏನನ್ನೂ ತೆಗೆದುಕೊಳ್ಳದೆ ಓಡಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವದನ್ನು ತೆಗೆದುಕೊಳ್ಳುವದಕ್ಕೆ ಇಳಿಯದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಮಾಳಿಗೆಯ ಮೇಲಿರುವವನು ಇಳಿದು ತನ್ನ ವಸ್ತುಗಳನ್ನು ಮನೆಯಿಂದ ತೆಗೆದುಕೊಳ್ಳದೆ ಓಡಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತೆಗೆದುಕೊಳ್ಳುವುದಕ್ಕೆ ಕೆಳಗೆ ಇಳಿಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 “ಜೆ ಕೊನ್ ಅಪ್ನಾಚ್ಯಾ ಘರಾಚ್ಯಾ ವರ್‍ತಿ ಮ್ಹಾಳ್ಗಿರ್ ಹಾತ್, ತೆನಿ ಘರಾತ್ ಜಾವ್ನ್ ಅಪ್ನಾಚಿ ಸಾಮಾನಾ ಹಾನುಕ್ ಮನುನ್ ಜಾವ್ನ್ ಎಳ್ ಕರುನಸುಂದಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:17
14 ತಿಳಿವುಗಳ ಹೋಲಿಕೆ  

ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.


ಮರುದಿನ ಅವರು ಪ್ರಯಾಣಮಾಡಿ ಆ ಪಟ್ಟಣದ ಹತ್ತಿರಕ್ಕೆ ಬರುತ್ತಿರುವಾಗ ಪೇತ್ರನು ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಗೆ ಪ್ರಾರ್ಥನೆಮಾಡುವುದಕ್ಕಾಗಿ ಮಹಡಿಯನ್ನು ಹತ್ತಿದನು.


ಹೀಗಿರುವುದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವುದು. ಮತ್ತು ನೀವು ಕೋಣೆಗಳೊಳಗೆ ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು.


ಜನರ ಗುಂಪು ದಟ್ಟವಾಗಿದ್ದ ಕಾರಣ ಅವನನ್ನು ಒಳಗೆ ತೆಗೆದುಕೊಂಡುಹೋಗುವ ಮಾರ್ಗವನ್ನು ಕಾಣದೆ ಮನೆಯ ಮೇಲೆ ಹತ್ತಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯ ಸಹಿತವಾಗಿ ಜನರ ನಡುವೆ ಯೇಸುವಿನ ಮುಂದೆ ಇಳಿಸಿದರು.


“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.


ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ ಮನೆಯ ಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತನಾಡಿದನು.


ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.


ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.


ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.


ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ;


ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂತಿರುಗಿ ಹೋಗದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು