Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಏಕೆಂದರೆ ಆಗ ಬರಲಿರುವ ಸಂಕಷ್ಟಗಳು ಸೃಷ್ಟಿಯ ಆದಿಯಿಂದ ಇಂದಿನವರೆಗೂ ಇರಲಿಲ್ಲ; ಇನ್ನು ಮುಂದಕ್ಕೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅಂಥ ಸಂಕಟವು ಲೋಕ ಹುಟ್ಟಿದ್ದು ಮೊದಲುಗೊಂಡು ಇಂದಿನವರೆಗೂ ಆಗಲಿಲ್ಲ. ಇನ್ನು ಮೇಲೆಯೂ ಆಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಏಕೆಂದರೆ ಆ ಸಮಯದಲ್ಲಿ ಮಹಾ ಸಂಕಟ ಇರುವುದು. ಲೋಕವು ಸೃಷ್ಟಿಯಾದಂದಿನಿಂದ ಇಂಥ ಸಂಕಟವು ಎಂದೂ ಸಂಭವಿಸಿಲ್ಲ. ಇನ್ನು ಮುಂದೆಯೂ ಸಂಭವಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಕಶ್ಯಾಕ್ ಮಟ್ಲ್ಯಾರ್, ತನ್ನಾ ಯೆತಲೊ ಕಸ್ಟ್ ಲೈ ಮೊಟೊ ಕಸ್ಟ್ ತೊ. ಹ್ಯೊ ಜಗ್ ರಚಲ್ಲ್ಯಾಕ್ನಾ ಆಜ್ ಪತರ್ ಅಸ್ಲೊ ಕಸ್ಟ್ ಯೆವ್ಕ್ ನಾ. ಅನಿ ಅನಿ ಫಿಡೆಬಿ ಯೆಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:21
20 ತಿಳಿವುಗಳ ಹೋಲಿಕೆ  

“ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.


ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ.


“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.


ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.


“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.


ವೃದ್ಧರೇ, ಇದನ್ನು ಕೇಳಿರಿ, ದೇಶದ ನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ. ಇಂಥ ಬಾಧೆಯು ನಿಮ್ಮ ಕಾಲದಲ್ಲಾಗಲಿ ನಿಮ್ಮ ಪೂರ್ವಿಕರ ಕಾಲದಲ್ಲಿಯಾಗಲಿ ಸಂಭವಿಸಿತ್ತೋ?


“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.


ನೀನು ಬಹಳ ಅಸಹ್ಯಕಾರ್ಯಗಳನ್ನು ನಡಿಸಿದ್ದರಿಂದ ನಾನು ಈವರೆಗೂ ಇನ್ನು ಮುಂದೆಯೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು.


ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥಿಸಿರಿ.


ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.


ಆಗ ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು