Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲ್ವಿಚಾರಕನನ್ನಾಗಿ ನೇಮಿಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಅಂಥವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುತ್ತಾನೆಂಬುದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ನೇವಿುಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ಆ ಯಜಮಾನನು ತನ್ನ ಆಸ್ತಿಗೆಲ್ಲಾ ಆ ಸೇವಕನನ್ನು ಮೇಲ್ವಿಚಾರಕನನ್ನಾಗಿ ನೇಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಅವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಯ ಮೇಲೆ ಆಡಳಿತಗಾರನಾಗಿ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ತೊ ಮಾಲಿಕ್ ಅಪ್ನಾಚ್ಯಾ ಸಗ್ಳ್ಯಾ ಅಸ್ತಿಚಿ ಅನಿ ಬದ್‍ಕಾಚಿ ಜವಾಬ್ದಾರಿ ತೆಚ್ಯಾ ವರ್‍ತಿ ಸೊಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:47
15 ತಿಳಿವುಗಳ ಹೋಲಿಕೆ  

ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಎಂದು ಹೇಳಿದನು.


ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.


ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಜಯ ಹೊಂದುವವನು ಇವುಗಳಿಗೆ ಬಾಧ್ಯನಾಗುವನು. ನಾನು ಅವನಿಗೆ ದೇವರಾಗಿರುವೆನು. ಅವನು ನನಗೆ ಮಗನಾಗಿರುವನು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.


ಅವನು ಅವನಿಗೆ, ‘ಭಲಾ! ನೀನು ಒಳ್ಳೆಯ ಆಳು, ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.


ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.


ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.


ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಬಹಳ ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.


ಜಾಣನಾದ ಸೇವಕನಿಗೆ ರಾಜನ ಕೃಪೆ, ಮಾನಗೇಡಿಗೆ ರಾಜನ ರೌದ್ರ.


ಯಜಮಾನನು ಬರುವಾಗ ಯಾವ ಆಳು ಹೀಗೆ ಮಾಡುತ್ತಿರುವುದನ್ನು ಕಾಣುವನೋ ಆ ಆಳು ಧನ್ಯನು.


ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು