Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ಉತ್ತರವಾಗಿ ಆ ಮದುವಣಿಗ, ‘ಅದಾಗದು, ನೀವು ಯಾರೋ ನನಗೆ ಗೊತ್ತಿಲ್ಲ,’ ಎಂದುಬಿಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನು - ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಆದರೆ ಮದುಮಗನು, ‘ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನೀವು ಯಾರೋ ನನಗೆ ಗೊತ್ತಿಲ್ಲ’ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಆದರೆ ಆತನು ಉತ್ತರವಾಗಿ, ‘ನಾನು ನಿಮ್ಮನ್ನು ಅರಿಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಖರೆ ನ್ಹವ್ರ್ಯಾನ್ ಭುತ್ತುರ್‍ನಾ ಜಬಾಬ್ ದಿವ್ನ್. ನಾ ಹೊಯ್ನಾ! ತುಮಿ ಕೊನ್ ಮನುನ್ ಮಾಕಾ ಖರೆಚ್‍ಬಿ ಗೊತ್ತ್ ನಾ. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:12
12 ತಿಳಿವುಗಳ ಹೋಲಿಕೆ  

ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ದೇವರು ಅವನನ್ನು ತಿಳಿದುಕೊಂಡಿದ್ದಾನೆ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.


ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು; ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ.


ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.


ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ, ಅಥವಾ ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ, ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ?


ನೀನು ಕೇಡನ್ನು ಬಯಸುವಂತಹ ದೇವರಲ್ಲ, ಪವಿತ್ರ ದೃಷ್ಟಿಯಿಂದ ನೋಡುವ ನಿನ್ನ ಕಣ್ಣಿನ ರಕ್ಷಣೆ ನಮ್ಮೊಂದಿಗಿದೆ. ಆದರೆ ನಮಗಾಗುತ್ತಿರುವ ಕೇಡನ್ನು ನೋಡಿಯೂ ಏಕೆ ಸುಮ್ಮನಿರುವೆ? ದುಷ್ಟರು ತಮಗಿಂತ ಯೋಗ್ಯನನ್ನು ಕಬಳಿಸುತ್ತಿರುವುದನ್ನು ನೋಡಿ ಏಕೆ ಸುಮ್ಮನಿರುವೇ?


ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು.


ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.


ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು