Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅಪ್ರಯೋಜಕನಾದ ಈ ಸೇವಕನನ್ನು ಹೊರಗಿನ ಕಗ್ಗತ್ತಲೆಗೆ ದಬ್ಬಿರಿ. ಅಲ್ಲಿ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು,’ ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಮತ್ತು ಕೆಲಸಕ್ಕೆ ಬಾರದ ಈ ಆಳನ್ನು ಹೊರಗೆ ಕತ್ತಲೆಗೆ ಹಾಕಿಬಿಡಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಬಳಿಕ ಆ ಯಜಮಾನನು, ‘ಕೆಲಸಕ್ಕೆ ಬಾರದ ಆ ಸೇವಕನನ್ನು, ಜನರು ಗೋಳಾಡುತ್ತಾ ಬಾಧೆಯಿಂದ ತಮ್ಮ ಹಲ್ಲುಗಳನ್ನು ಕಡಿಯುತ್ತಿರುವ ಕಗ್ಗತ್ತಲೆಯ ಸ್ಥಳಕ್ಕೆ ದಬ್ಬಿರಿ’ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಿಷ್ಪ್ರಯೋಜಕನಾದ ಆ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತ್ಯಾ ಕಾಮಾಕ್ ಯೆವ್ ನಸಲ್ಲ್ಯಾ ಆಳಾಕ್ ಭಾಯ್ರ್ ಕಾಳ್ಕಾತ್ ಢಕ್ಲುನ್ ಘಾಲಾ; ಥೈ ತೊ ಬೊಬ್ ಮಾರ್‍ತಾ ಅನಿ ತರಾಸಾನ್ ದಾತಾ ಚಾವ್ತಾ. ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:30
19 ತಿಳಿವುಗಳ ಹೋಲಿಕೆ  

ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು” ಎಂದು ಹೇಳಿದನು.


ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’


ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.


ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.


ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.


ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.


ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.


ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ.


“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.


ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು