Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ವಿವೇಕಿಗಳಾದರೋ ದೀಪಗಳ ಜೊತೆಗೆ ಬುಡ್ಡಿಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬುದ್ಧಿವಂತೆಯರು ತಮ್ಮ ಆರತಿಗಳ ಕೂಡ ಪಾತ್ರೆಗಳಲ್ಲಿ ಎಣ್ಣೆ ತಕ್ಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಬುದ್ಧಿವಂತೆಯರು ತಮ್ಮ ದೀಪಗಳೊಂದಿಗೆ ಬೇಕಾದಷ್ಟು ಎಣ್ಣೆಯನ್ನೂ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಬುದ್ಧಿವಂತೆಯರೋ, ತಮ್ಮ ದೀಪಗಳೊಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಬುದ್ದ್ ಅಸಲ್ಲ್ಯಾನಿ ತೆಂಚ್ಯಾ ಆರ್‍ತಿಯಾಂಚ್ಯಾ ವಾಂಗ್ಡಾ ಡಬ್ಬ್ಯಾತ್ನಾ ಜಾಸ್ತಿಚೆ ತೆಲ್ ಬಿ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:4
15 ತಿಳಿವುಗಳ ಹೋಲಿಕೆ  

ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾರಲ್ಲಿ ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ.


ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.


ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದೀರಿ ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ.


ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.


ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, ಪ್ರಾಕೃತ ಮನುಷ್ಯರೂ, ದೇವರಾತ್ಮ ಇಲ್ಲದವರೂ ಆಗಿದ್ದಾರೆ.


ಆತನು ನಮ್ಮ ಮೇಲೆ ತನ್ನ ಮುದ್ರೆಯನ್ನೊತ್ತಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಖಾತರಿಯಾಗಿ ಅನುಗ್ರಹಿಸಿದ್ದಾನೆ.


“ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.


“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು.


ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.


ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು