Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 “ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆಮೇಲೆ ಆತನು ಎಡಗಡೆಯಲ್ಲಿರುವವರಿಗೆ - ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 “ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 “ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಮಾನಾ ತೊ ಅಪ್ನಾಚ್ಯಾ ರೊಡ್ಡ್ಯಾ ಬಾಜುಕ್ ಹೊತ್ತ್ಯಾ ಲೊಕಾಕ್ನಿ, ಜಾವಾ ತುಮಿ ಸರಾಪ್ ಪಡಲ್ಲ್ಯಾನು ಮಾಜ್ಯಾ ಇದ್ರಾಕ್ನಾ ಧುರ್ ಜಾವಾ, ಗಿರೊ ಅನಿ ತೆಚ್ಯಾ ದುತಾಕ್ನಿ ತಯಾರ್ ಕರಲ್ಲ್ಯಾ ಕನ್ನಾಚ್ ಇಜಿ ನಸಲ್ಲ್ಯಾ ಆಗಿತ್ ಜಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:41
33 ತಿಳಿವುಗಳ ಹೋಲಿಕೆ  

ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.


ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.


ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು


ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು.


ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.


ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.


ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. ಕೊನೆಗದು ಸುಡಲ್ಪಡುತ್ತದೆ.


ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.


“ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.”


ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.


‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.


ಆದರೆ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ’ ಎಂದು ನಿಮಗೆ ಹೇಳುತ್ತೇನೆ ಅನ್ನುವನು.


ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.


ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.


ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.


ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.


ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ, ಎಷ್ಟೋ ಒಳ್ಳೆಯದು. ಕೊಲೆಪಾತಕರೇ, ನನ್ನಿಂದ ತೊಲಗಿಹೋಗಿರಿ.


ದುಷ್ಟರೇ, ತೊಲಗಿರಿ, ನನ್ನ ದೇವರ ಆಜ್ಞೆಗಳನ್ನು ಕೈಗೊಳ್ಳುವೆನು.


ನೀನು ಗರ್ವಿಷ್ಠರನ್ನು ಗದರಿಸುತ್ತಿ, ನಿನ್ನ ಆಜ್ಞೆಗಳನ್ನು ಮೀರಿದವರು ಶಾಪಗ್ರಸ್ತರು.


ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.


ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.


ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ.


ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು