Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಅದಕ್ಕೆ ಪ್ರತ್ಯುತ್ತರವಾಗಿ ಅರಸನು, ‘ಇವರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆಹೋದಾಗ ಅದನ್ನು ನನಗೇ ಮಾಡಲಿಲ್ಲ,’ ಎನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಆಗ ಆತನು - ನೀವು ಈ ಕೇವಲ ಅಲ್ಪವಾದವರಲ್ಲಿ ಒಬ್ಬನಿಗೆ ಏನೇನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 “ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡದಂತಾಯಿತು’ ಎಂದು ಉತ್ತರಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 “ಆಗ ನಾನು ಅವರಿಗೆ ಉತ್ತರವಾಗಿ, ‘ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ನೀವು ಇವರಲ್ಲಿ ಅತ್ಯಲ್ಪನಾದ ಒಬ್ಬನಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡಲಿಲ್ಲ,’ ಎಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ತನ್ನಾ ರಾಜಾ, ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಕನ್ನಾ ತುಮಿ ಮಾಜ್ಯಾ ಹ್ಯಾ ಭಾವಾನಿತ್ಲ್ಯಾ ಎಕ್ ಬಾರಿಕ್ಲ್ಯಾ ಭಾವಾಕ್ ಮಜತ್ ಕರಿನಸ್ತಾನಾ ರ್‍ಹಾಲ್ಯಾಶಿ, ತನ್ನಾ ಮಾಕಾಚ್ ಮಜತ್ ಕರಿನಸ್ತಾನಾ ರ್‍ಹಾಲ್ಯಾಶಿ. ಮನುನ್ ಮನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:45
16 ತಿಳಿವುಗಳ ಹೋಲಿಕೆ  

ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.


ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.


ಅದಕ್ಕೆ ಸೌಲನು;, “ಕರ್ತನೇ, ನೀನಾರು?” ಎಂದು ಕೇಳಿದ್ದಕ್ಕೆ, ಕರ್ತನು, “ನೀನು ಹಿಂಸೆಪಡಿಸುವ ಯೇಸುವೇ ನಾನು;


ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.


“ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು” ಎಂದು ಹೇಳಿದನು.


ನಿಮ್ಮನ್ನು ತಾಕುವವನು ನನ್ನ ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ. ಆದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ,


ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ, ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು? ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ, ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು.


ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.


ಪ್ರವಾದಿಯನ್ನು ಪ್ರವಾದಿಯೆಂದು ಸ್ವೀಕರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸ್ವೀಕರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.


ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು.


ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.


ಹೀಗಿರಲಾಗಿ ನೀವು ಸಹೋದರರ ವಿರುದ್ಧ ಪಾಪ ಮಾಡಿ ಅವರ ದುರ್ಬಲವಾದ ಮನಸ್ಸಾಕ್ಷಿಯನ್ನು ನೋಯಿಸಿದರೆ ನೀವು ಕ್ರಿಸ್ತನ ವಿರುದ್ಧ ಪಾಪಮಾಡುವವರಾಗುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು