Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಸುರಿದದ್ದು ನನ್ನ ಉತ್ತರಕ್ರಿಯೆಗಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಈಕೆ ಈ ತೈಲವನ್ನು ನನ್ನ ದೇಹದ ಮೇಲೆ ಸುರಿದು ನನ್ನ ಶವಸಂಸ್ಕಾರಕ್ಕೆ ಸಿದ್ಧಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಹೊಯಿದದ್ದು ನನ್ನ ಉತ್ತರಕ್ರಿಯೆಗಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ಸತ್ತನಂತರ ನನ್ನನ್ನು ಸಮಾಧಿಗೆ ಸಿದ್ಧಪಡಿಸುವುದಕ್ಕಾಗಿ ಈ ಸ್ತ್ರೀಯು ನನ್ನ ದೇಹದ ಮೇಲೆ ಸುಗಂಧತೈಲವನ್ನು ಸುರಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಈಕೆ ಈ ತೈಲವನ್ನು ನನ್ನ ದೇಹದ ಮೇಲೆ ಸುರಿದದ್ದರಿಂದ, ನನ್ನ ಶವಸಂಸ್ಕಾರಕ್ಕೆ ಸಿದ್ಧಮಾಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತೆನಿ ಮಾಜ್ಯಾ ಆಂಗಾ ವರ್‍ತಿ ತೆಲ್ ವೊತುನ್ ಮಾಕಾ ಮಾಟಿ ದಿವ್ಕ್ ಮನುನ್ ತಯಾರ್ ಕರ್‍ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:12
8 ತಿಳಿವುಗಳ ಹೋಲಿಕೆ  

ಆಗ ಯೇಸುವು, “ಈಕೆಯನ್ನು ಬಿಟ್ಟುಬಿಡಿರಿ, ನನ್ನನ್ನು ಸಮಾಧಿ ಮಾಡುವ ದಿನಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಳು ಎಂದಿರಲಿ.


ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ಈ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ.


ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು. ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡರು.


ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು.


ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು.


ತರುವಾಯ ಯೋಸೇಫನು ತನ್ನ ಸೇವಕರಾದ ವೈದ್ಯರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಇಸ್ರಾಯೇಲನ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು