Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ, “ಇಲ್ಲೇ ಕುಳಿತುಕೊಳ್ಳಿರಿ, ನಾನು ಅತ್ತ ಹೋಗಿ ಪ್ರಾರ್ಥಿಸುತ್ತೇನೆ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅನಂತರ ಯೇಸುಸ್ವಾಮಿ ಅವರೊಡನೆ ಗೆತ್ಸೆಮನೆ ಎಂಬ ತೋಪಿಗೆ ಬಂದರು. ಅಲ್ಲಿ ಶಿಷ್ಯರಿಗೆ, “ನಾನು ಅತ್ತ ಹೋಗಿ ಪ್ರಾರ್ಥನೆಮಾಡಿ ಬರುವವರೆಗೂ ನೀವು ಇಲ್ಲೇ ಕುಳಿತಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ - ಇಲ್ಲೇ ಕೂತುಕೊಳ್ಳಿರಿ, ನಾನು ಅತ್ತಲಾಗಿ ಹೋಗಿ ಪ್ರಾರ್ಥನೆ ಮಾಡಿ ಬರುತ್ತೇನೆ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಅನಂತರ ಯೇಸು ತನ್ನ ಶಿಷ್ಯರೊಂದಿಗೆ ಗೆತ್ಸೆಮನೆ ಎಂಬ ಸ್ಥಳಕ್ಕೆ ಹೋದನು. ಯೇಸು ತನ್ನ ಶಿಷ್ಯರಿಗೆ, “ನಾನು ಅಲ್ಲಿಗೆ ಹೋಗಿ, ಪ್ರಾರ್ಥಿಸಿ ಬರುವ ತನಕ ಇಲ್ಲಿಯೇ ಇರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ತರುವಾಯ ಯೇಸು ತಮ್ಮ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ, “ನಾನು ಅಲ್ಲಿಗೆ ಹೋಗಿ ಪ್ರಾರ್ಥಿಸುವವರೆಗೆ ನೀವು ಇಲ್ಲೇ ಕುಳಿತುಕೊಳ್ಳಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಮಾನಾ ಜೆಜು ಅಪ್ನಾಚ್ಯಾ ಶಿಸಾಂಚ್ಯಾ ವಾಂಗ್ಡಾ ಗೆತ್ಸೆಮನಿ ಮನ್ತಲ್ಯಾ ಮಳ್ಯಾಕ್ ಗೆಲೊ, ಅನಿ ತೆಂಕಾ,“ಮಿಯಾ ಉಲ್ಲೆ ಫಿಡೆ ಜಾವ್ನ್ ಮಾಗ್ನಿ ಕರ್‍ತಾ ತುಮಿ ಹಿತ್ತೆಚ್ ಬಸಾ.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:36
10 ತಿಳಿವುಗಳ ಹೋಲಿಕೆ  

ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.


ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.


ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು.


ನೀನು ಪ್ರಾರ್ಥನೆಮಾಡುವಾಗ ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು