Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಎರಡನೆಯ ಬಾರಿ ಹಿಂದಕ್ಕೆ ಹೋಗಿ ಇಂತೆಂದು ಪ್ರಾರ್ಥನೆಮಾಡಿದರು: “ನನ್ನ ಪಿತನೇ, ನಾನು ಸೇವಿಸದ ಹೊರತು ಈ ಕಷ್ಟದ ಕೊಡ ನನ್ನಿಂದ ತೊಲಗದಾದರೆ ಅದು ನಿಮ್ಮ ಚಿತ್ತದಂತೆಯೇ ಆಗಲಿ,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ತಿರಿಗಿ ಎರಡನೆಯ ಸಾರಿ ಹೋಗಿ - ನನ್ನ ತಂದೆಯೇ, ನಾನು ಕುಡಿದ ಹೊರತು ಈ ಪಾತ್ರೆ ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಎಂದು ಪ್ರಾರ್ಥನೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಯೇಸು ಎರಡನೆಯ ಸಾರಿ ಸ್ಪಲ್ಪದೂರ ಹೋಗಿ ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಂಕಟದ ಈ ಪಾತ್ರೆಯನ್ನು ನನ್ನಿಂದ ತೆಗೆದುಕೊಳ್ಳಲು ಸಾಧ್ಯವಿಲ್ಲದಿದ್ದರೆ ಮತ್ತು ನಾನು ಅದನ್ನು ನೆರವೇರಿಸಲೇಬೇಕಿದ್ದರೆ, ನಿನ್ನ ಇಷ್ಟದಂತೆಯೇ ಆಗಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಯೇಸು ಎರಡನೆಯ ಸಾರಿ ಹೋಗಿ, ಪ್ರಾರ್ಥಿಸುತ್ತಾ, “ನನ್ನ ತಂದೆಯೇ ನಾನು ಕುಡಿಯದ ಹೊರತು ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ, ನಿನ್ನ ಚಿತ್ತವೇ ಆಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಅನಿ ಎಗ್ದಾ ಜೆಜು ಫಿಡೆ ಗೆಲೊ ಅನಿ, “ಮಾಜ್ಯಾ ಬಾಬಾ, ಹೆ ಕಸ್ಟಾಚೆ ಆಯ್ದಾನ್ ಮಿಯಾ ಫಿಲ್ಯಾ ಸಿವಾಯ್ ಧುರ್ ಕರುಕ್ ಹೊಯ್ನಾ ಮನುನ್ ರ್‍ಹಾಲ್ಯಾರ್, ತುಜ್ಯಾ ಮನಾ ಸರ್ಕೆಚ್ ಹೊಂವ್ದಿತ್.” ಮನುನ್ ಮಾಗುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:42
14 ತಿಳಿವುಗಳ ಹೋಲಿಕೆ  

ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.


ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.


“ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?” ಎಂದು ಕೇಳಿದನು. ಅವರು ಆತನಿಗೆ, “ನಮ್ಮಿಂದ ಆಗುವುದು” ಅಂದರು.


ಆತನು ತಿರುಗಿ ಬಂದಾಗಲೂ ಅವರು ನಿದ್ದೆಮಾಡುವುದನ್ನು ಕಂಡನು; ಅವರ ಕಣ್ಣುಗಳು ಭಾರವಾಗಿದ್ದವು.


“ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ” ಎಂದನು.


“ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು. ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ” ಪ್ರಾರ್ಥಿಸಿದನು.


ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು