ಮತ್ತಾಯ 26:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಅನಂತರ ಮತ್ತೆ ಅವರನ್ನು ಬಿಟ್ಟು ಹೊರಟುಹೋಗಿ ತಿರುಗಿ ಅದೇ ಮಾತುಗಳನ್ನು ಹೇಳುತ್ತಾ ಮೂರನೆಯ ಸಾರಿಯೂ ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಪುನಃ ಅವರನ್ನು ಬಿಟ್ಟು ಹಿಂದಿರುಗಿ ಮೂರನೆಯ ಬಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಆಮೇಲೆ ತಿರಿಗಿ ಅವರನ್ನು ಬಿಟ್ಟುಹೋಗಿ ತಿರಿಗಿ ಅದೇ ಮಾತನ್ನು ಹೇಳುತ್ತಾ ಮೂರನೆಯ ಸಾರಿ ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಆದ್ದರಿಂದ ಯೇಸು ಮತ್ತೊಮ್ಮೆ ಅವರನ್ನು ಬಿಟ್ಟು ಸ್ವಲ್ಪ ದೂರ ಹೋಗಿ ಮೂರನೆಯ ಸಾರಿ ಅದೇ ರೀತಿ ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಯೇಸು ಅವರನ್ನು ಬಿಟ್ಟು ಹೊರಟುಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಪುನಃ ಹೇಳಿ ಪ್ರಾರ್ಥಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ಅನಿ ಪರ್ತುನ್ ಜೆಜು ತೆಂಕಾ ಸೊಡುನ್ ಫಿಡೆ ಗೆಲೊ ಅನಿ ತಿನ್ವೆಪಟಿಬಿ ತೆನಿ ತಸೆಚ್ ಮನುನ್ ಮಾಗ್ನಿ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |