Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ತರುವಾಯ ಆತನು ಶಿಷ್ಯರ ಬಳಿಗೆ ಬಂದು ಅವರಿಗೆ, “ನೀವು ಇನ್ನು ನಿದ್ದೆ ಮಾಡಿ ವಿಶ್ರಮಿಸಿಕೊಳ್ಳುತ್ತಿದ್ದೀರೋ; ಇಗೋ, ಅ ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ಪಾಪಿಷ್ಠರ ಕೈಗೆ ಒಪ್ಪಿಸಲ್ಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಅದಾದ ಬಳಿಕ ಶಿಷ್ಯರನ್ನು ಸಮೀಪಿಸಿ, “ನೀವು ಇನ್ನೂ ನಿದ್ರಿಸಿ ವಿಶ್ರಮಿಸುತ್ತಾ ಇರುವಿರೋ? ಸಾಕು, ಸಮಯ ಸಮೀಪಿಸಿಬಿಟ್ಟಿತು. ನರಪುತ್ರನು ದುರ್ಜನರ ಕೈವಶವಾಗಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ತರುವಾಯ ಶಿಷ್ಯರ ಬಳಿಗೆ ಬಂದು ಅವರಿಗೆ - ನೀವು ಇನ್ನೂ ನಿದ್ದೆಮಾಡಿ ದಣುವಾರಿಸಿಕೊಳ್ಳಿರಿ; ಇಗೋ, ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ದುರ್ಜನರ ಕೈಗೆ ಒಪ್ಪಿಸಲ್ಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಬಳಿಕ ಯೇಸು ತನ್ನ ಶಿಷ್ಯರ ಬಳಿಗೆ ಹಿಂದಿರುಗಿ, “ನೀವು ಇನ್ನೂ ನಿದ್ರೆ ಮಾಡುತ್ತಾ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದೀರಾ? ಪಾಪಿಷ್ಠರಾದ ಜನರಿಗೆ ಮನುಷ್ಯಕುಮಾರನನ್ನು ಒಪ್ಪಿಸುವ ಕಾಲ ಸಮೀಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ತರುವಾಯ ಯೇಸು ತಮ್ಮ ಶಿಷ್ಯರ ಬಳಿಗೆ ಬಂದು ಅವರಿಗೆ, “ಇನ್ನೂ ವಿಶ್ರಮಿಸುತ್ತಿದ್ದೀರಾ? ಇಗೋ, ಮನುಷ್ಯಪುತ್ರನಾದ ನಾನು ಪಾಪಿಗಳ ಕೈವಶವಾಗುವ ಸಮಯವು ಸಮೀಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ತನ್ನಾ ತೊ ಅಪ್ನಾಚ್ಯಾ ಶಿಸಾನಿಕ್ಡೆ ಪರ್ತುನ್ ಯೆಲೊ, ಅನಿ. “ಅಜುನ್‍ಬಿ ತುಮಿ ನಿಜುನ್ ಅರಾಮ್ ಕರುಕ್ ಲಾಗ್ಲ್ಯಾಶಿ? ಅಬಕಾ! ಮಾನ್ಸಾಚ್ಯಾ ಲೆಕಾಕ್ ಧರುನ್ ಪಾಪಿ ಲೊಕಾಂಚ್ಯಾ ಹಾತಿತ್ ಒಪಸ್ತಲೊ ಎಳ್ ಯೆಲೊ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:45
14 ತಿಳಿವುಗಳ ಹೋಲಿಕೆ  

ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.


ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ, ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.


ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?


ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ. ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ” ಎಂದು ಹೇಳಿದನು.


ಆತನು, “ನೀವು ಪಟ್ಟಣದೊಳಕ್ಕೆ ನಾನು ಸೂಚಿಸಿದವನ ಬಳಿಗೆ ಹೋಗಿ ಅವನಿಗೆ, ‘ನನ್ನ ಕಾಲ ಸಮೀಪವಾಯಿತು, ನಾನು ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬ ಮಾಡುತ್ತೇನೆ’ ಎಂಬುದಾಗಿ ಗುರುವು ಹೇಳುತ್ತಿದ್ದಾನೆ ಎಂದು ಹೇಳಿರಿ” ಅಂದನು.


ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು” ಎಂದು ಹೇಳಿದನು.


ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿ, “ಗಟ್ಟಿಯಾಗಿ ಕೂಗಿರಿ, ಅವನು ದೇವರಾಗಿರುತ್ತಾನಲ್ಲಾ. ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು, ಇಲ್ಲವೇ ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು” ಎಂದು ಹೇಳಿದನು.


ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ಅನಂತರ ಮತ್ತೆ ಅವರನ್ನು ಬಿಟ್ಟು ಹೊರಟುಹೋಗಿ ತಿರುಗಿ ಅದೇ ಮಾತುಗಳನ್ನು ಹೇಳುತ್ತಾ ಮೂರನೆಯ ಸಾರಿಯೂ ಪ್ರಾರ್ಥಿಸಿದನು.


ಏಳಿರಿ, ಹೋಗೋಣ; ನನ್ನನ್ನು ಹಿಡಿದುಕೊಡುವವನು ಹತ್ತಿರಕ್ಕೆ ಬಂದಿದ್ದಾನೆ ನೋಡಿರಿ” ಎಂದು ಹೇಳಿದನು.


ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿಹೋಗುವಂತೆ ಪ್ರಾರ್ಥಿಸಿದನು.


ಆಗ ಯೇಸು ಅವರಿಗೆ, “ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು