ಮತ್ತಾಯ 26:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಹಾಗು ಜನರ ಹಿರಿಯರ ಕಡೆಯಿಂದ ಬಹು ಜನರ ಗುಂಪು ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಅವನ ಸಂಗಡ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಯೇಸುಸ್ವಾಮಿ ಇನ್ನೂ ಮಾತನಾಡುತ್ತಿದ್ದ ಹಾಗೆ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದಿದ್ದ ಒಂದು ದೊಡ್ಡ ಗುಂಪು ಅವನೊಂದಿಗೆ ಇತ್ತು. ಮುಖ್ಯಯಾಜಕರೂ ಜನರ ಪ್ರಮುಖರೂ ಅವರನ್ನು ಕಳುಹಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಆತನು ಇನ್ನೂ ಮಾತಾಡುತ್ತಿರಲು ಇಗೋ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು; ಮಹಾಯಾಜಕರು ಜನರ ಹಿರಿಯರು ಇವರ ಕಡೆಯಿಂದ ಬಹು ಜನರ ಗುಂಪು ಕತ್ತಿ ದೊಣ್ಣೆಗಳನ್ನು ಹಿಡುಕೊಂಡು ಅವನ ಸಂಗಡ ಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಯೇಸು ಮಾತಾಡುತ್ತಿರವಷ್ಟರಲ್ಲೇ ಯೂದನು ಅಲ್ಲಿಗೆ ಬಂದನು. ಯೂದನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾಗಿದ್ದನು. ಮಹಾಯಾಜಕರು ಮತ್ತು ಹಿರಿಯ ನಾಯಕರು ಕಳುಹಿಸಿದ್ದ ಅನೇಕ ಜನರು ಅವನೊಂದಿಗಿದ್ದರು. ಅವರು ಕತ್ತಿ ಮತ್ತು ದೊಣ್ಣೆಗಳನ್ನು ಹಿಡಿದುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಖಡ್ಗ ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 ಅಶೆ ಜೆಜು ಬೊಲುನ್ಗೆತ್ ಹೊತ್ತ್ಯಾ ತನ್ನಾಚ್ ಜುದಾಸ್ ಮನ್ತಲೊ ಬಾರಾ ಜಾನಾ ಶಿಸಾನಿತ್ಲೊ ಎಕ್ಲೊ ಥೈ ಯೆವ್ನ್ ಪಾವ್ಲೊಚ್. ತೆಚ್ಯಾ ಫಾಟ್ನಾ ಕೊಯ್ತೆ ಅನಿ ಟೊನೆ ಘೆವ್ನ್ ಎಕ್ ಮೊಟೊ ಲೊಕಾಂಚೊ ತಾಂಡೊ ಹೊತ್ತೊ. ಮುಖ್ಯ ಯಾಜಕಾನಿ ಅನಿ ಜುದೆವಾಂಚ್ಯಾ ಜಾನ್ತ್ಯಾನಿ ತೆಂಕಾ ಧಾಡುನ್ ದಿಲ್ಲ್ಯಾನಿ. ಅಧ್ಯಾಯವನ್ನು ನೋಡಿ |