Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:67 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

67 ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

67 ಬಳಿಕ ಅವರು ಯೇಸುಸ್ವಾಮಿಯ ಮುಖದ ಮೇಲೆ ಉಗುಳಿದರು; ಅವರನ್ನು ಗುದ್ದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

67 ಆಗ ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಏಟುಹಾಕಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

67 ನಂತರ ಜನರು ಅಲ್ಲಿಯೇ ಯೇಸುವಿನ ಮುಖದ ಮೇಲೆ ಉಗುಳಿದರು. ಮುಷ್ಠಿಯಿಂದ ಆತನನ್ನು ಗುದ್ದಿದರು. ಆತನ ಕೆನ್ನೆಗೆ ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

67 ಆಮೇಲೆ ಅವರು ಯೇಸುವಿನ ಮುಖದ ಮೇಲೆ ಉಗುಳಿ ಅವರನ್ನು ಗುದ್ದಿದರು. ಬೇರೆ ಕೆಲವರು ಅವರ ಕೆನ್ನೆಗೆ ಹೊಡೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

67 ತನ್ನಾ ತೆನಿ ತೆಚ್ಯಾ ತೊಂಡಾರ್ ಥುಕ್ಲ್ಯಾನಿ, ಅನಿ ಮುಟ್ಕ್ಯಾನಿ ಮಾರ್‍ಲ್ಯಾನಿ; ಅನಿ ತೆಕಾ ಠಪ್ರಾಕ್ಯಾ ಮಾರುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:67
24 ತಿಳಿವುಗಳ ಹೋಲಿಕೆ  

ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.


ಯೇಸು ಈ ಮಾತನ್ನು ಹೇಳಿದಾಗ ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ತನ್ನ ಕೈಯಿಂದ ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.


ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು.


ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.


ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.


ಆತನ ಬಳಿಗೆ ಬಂದು “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಹೇಳಿ ತಮ್ಮ ಕೈಗಳಿಂದ ಆತನ ಕೆನ್ನೆಗೆ ಹೊಡೆದರು.


ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು, ಆತನ ಮೇಲೆ ಉಗುಳಿ, ಆತನ ಮುಂದೆ ಮೊಣಕಾಲೂರಿ ನಮಸ್ಕರಿಸಿದರು.


ಹೊಡೆಯುವವನಿಗೆ ತನ್ನ ಕೆನ್ನೆಯನ್ನು ಕೊಟ್ಟು ಅವಮಾನವನ್ನು ಹೊಟ್ಟೆತುಂಬಾ ತಿನ್ನಲಿ.


ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ, ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವುದನ್ನು ನೋಡಿ, ಅನೇಕರು ಹೇಗೆ ಹೆದರಿದರೋ,


ಅಪವಾದ ಹೊರಿಸುವವರನ್ನು ಕನಿಕರದಿಂದ ಮಾತನಾಡಿಸುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದಕ್ಕಿಂತಲೂ ಹೀನವೋ ಎಂಬಂತೆ ಆಗಿದ್ದೇವೆ.


ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.


ಚಿಯೋನ್ ನಗರವೇ ನಿನ್ನ ಸೇನಾವ್ಯೂಹಗಳನ್ನು ಈಗ ಒಟ್ಟುಗೂಡಿಸು. ಆಹಾ ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.


ನಮ್ಮನ್ನು ಜನಾಂಗಗಳ ಮಧ್ಯದಲ್ಲಿ ಕಸವನ್ನಾಗಿಯೂ ಮತ್ತು ಹೊಲಸನ್ನಾಗಿಯೂ ಹಾಕಿಬಿಟ್ಟಿದ್ದೀ.


ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ, ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.


ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು?” ಎನ್ನಲು


ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, “ಅಣ್ಣನಿಗೋಸ್ಕರ ಸಂತಾನವನ್ನು ವೃದ್ಧಿಗೊಳಿಸುವುದಕ್ಕೆ ಮನಸ್ಸಿಲ್ಲದವರೆಲ್ಲರಿಗೆ ಇಂಥ ಅವಮಾನವಾಗಲಿ” ಎಂದು ಹೇಳಬೇಕು.


ಅದಕ್ಕೆ ಯೆಹೋವನು ಮೋಶೆಗೆ, “ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೇ? ಹಾಗಾದರೆ ಆಕೆ ಏಳು ದಿನ ಪಾಳೆಯದ ಹೊರಗೆ ಇರಲಿ, ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು” ಎಂದು ಉತ್ತರಕೊಟ್ಟನು.


“ಕ್ರಿಸ್ತನೇ, ನಿನ್ನನ್ನು ಹೊಡೆದವರಾರು? ನಮಗೆ ಪ್ರವಾದನೆ ಹೇಳು” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು