Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:73 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

73 ಸ್ವಲ್ಪ ಹೊತ್ತಿನ ನಂತರ ಅಲ್ಲಿ ನಿಂತಿದ್ದವರು ಮುಂದೆ ಬಂದು ಪೇತ್ರನಿಗೆ, “ನಿಶ್ಚಯವಾಗಿ ನೀನೂ ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು (ಗಲಿಲಾಯದವನೆಂದು) ತೋರಿಸಿಕೊಡುತ್ತದೆ” ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

73 ಸ್ವಲ್ಪಹೊತ್ತಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನ ಹತ್ತಿರಕ್ಕೆ ಬಂದು, “ಖಂಡಿತವಾಗಿ ನೀನೂ ಅವರಲ್ಲಿ ಒಬ್ಬನು. ನೀನು ಮಾತನಾಡುವ ರೀತಿಯೇ ನಿನ್ನನ್ನು ತೋರಿಸಿಕೊಡುತ್ತದೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

73 ಸ್ವಲ್ಪ ಹೊತ್ತಿನ ಮೇಲೆ ಅಲ್ಲಿ ನಿಂತವರು ಮುಂದೆ ಬಂದು ಪೇತ್ರನಿಗೆ - ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು, ನಿನ್ನ ಭಾಷೆಯೇ ನಿನ್ನನ್ನು [ಗಲಿಲಾಯದವನೆಂದು] ತೋರಿಸಿಕೊಡುತ್ತದೆ ಎಂದು ಹೇಳಲಾಗಿ ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

73 ಸ್ವಲ್ಪ ಸಮಯದ ತರುವಾಯ, ಅಲ್ಲಿ ನಿಂತಿದ್ದ ಕೆಲವು ಜನರು ಪೇತ್ರನ ಸಮೀಪಕ್ಕೆ ಹೋಗಿ, “ಯೇಸುವನ್ನು ಹಿಂಬಾಲಿಸಿಕೊಂಡು ಬಂದ ಜನರಲ್ಲಿ ನೀನೂ ಒಬ್ಬನಾಗಿರುವೆ ಎಂಬುದನ್ನು ನೀನು ಮಾತಾಡುವ ರೀತಿಯೇ ತೋರಿಸುತ್ತದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

73 ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಸಹ ಅವರಲ್ಲಿ ಒಬ್ಬನು. ನಿಜವಾಗಿಯೂ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

73 ಎಕ್ ಉಲ್ಲೊ ಎಳ್ ಹೊಲ್ಲ್ಯಾ ಮಾನಾ ಥೈ ಇಬೆ ಹೊತ್ತಿ ಘೊಮನ್ಸಾ ಪೆದ್ರುಕ್ಡೆ ಯೆಲಿ. “ಖರೆಚ್ ತಿಯಾಬಿ ತೆಂಚ್ಯಾತ್ಲೊ ಎಕ್ಲೊ, ತುಜ್ಯಾ ಬೊಲ್ನ್ಯಾ ವೈನಾಚ್ ಕಳುಕ್ ಲಾಗ್ಲಾ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:73
8 ತಿಳಿವುಗಳ ಹೋಲಿಕೆ  

ಅವನು ಅಲ್ಲವೆಂದರೆ ಅವನಿಗೆ, “ನೀನು ಷಿಬ್ಬೋಲೆತ್ ಎಂದು ಹೇಳು” ಎಂದು ಹೇಳುವರು. ಹಾಗೆ ಅನ್ನಲಿಕ್ಕೆ ಬಾರದೆ ಅವನು ಸಿಬ್ಬೋಲೆತ್ ಅನ್ನುವನು. ಕೂಡಲೆ ಅವರು ಅವನನ್ನು ಹಿಡಿದು ಯೊರ್ದನಿನ ಹಾಯಗಡಗಳ (ಕಾಲ್ನಡಿಗೆಯಿಂದ ದಾಟಬಹುದಾದ ನಿರುಳ್ಳಸ್ಥಳ) ಬಳಿಯಲ್ಲೇ ಕೊಂದುಹಾಕುವರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಲ್ವತ್ತೆರಡು ಸಾವಿರ ಜನರು ಹತರಾದರು.


ಅವರ ಮಕ್ಕಳಲ್ಲಿ ಅರ್ಧ ಮಂದಿ ಯೂದಾಯ ಭಾಷೆಯಲ್ಲಿ ಮಾತನಾಡದೆ, ಅಷ್ಡೋದ್ಯ ಭಾಷೆಯನ್ನಾಡುತ್ತಾರೆಂದು ತಿಳಿದು ನಾನು ಕೋಪಗೊಂಡೆನು.


ಅವನು ತಿರುಗಿ ನಿರಾಕರಿಸಿ ಆಣೆಯಿಟ್ಟು, “ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು.


ಅವನು, “ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು.


ಆಗ ಅವನು ಮತ್ತೆ ನಿರಾಕರಿಸಿದನು. ಸ್ವಲ್ಪ ಹೊತ್ತಿನ ಮೇಲೆ ಪಕ್ಕದಲ್ಲಿ ನಿಂತವರು ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು, ಯಾಕೆಂದರೆ ನೀನು ಗಲಿಲಾಯದವನೇ” ಎಂದರು.


ಎಲ್ಲರೂ ವಿಸ್ಮಯದಿಂದ ಬೆರಗಾಗಿ, “ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು