ಮತ್ತಾಯ 26:75 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201975 ಪೇತ್ರನಿಗೆ ಯೇಸು, “ಹುಂಜವೂ ಕೂಗುವುದಕ್ಕಿಂತ ಮೊದಲೇ ಮೂರು ಸಾರಿ ನನ್ನನ್ನು ನಿರಾಕರಿಸುವಿ” ಎಂದು ಹೇಳಿದ ಮಾತನ್ನು ನೆನಪಿಸಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)75 ಆ ಕ್ಷಣವೇ ಕೋಳಿಕೂಗಿತು. “ಕೋಳಿಕೂಗುವ ಮೊದಲೇ, ‘ಆತನನ್ನು ನಾನರಿಯೆ’ಎಂದು ನನ್ನನ್ನು ಮೂರುಬಾರಿ ನಿರಾಕರಿಸುವೆ,” ಎಂದ ಸ್ವಾಮಿಯ ನುಡಿ ಪೇತ್ರನ ನೆನಪಿಗೆ ಬಂದಿತು. ಆತನು ಅಲ್ಲಿಂದ ಹೊರಗೆ ಹೋಗಿ, ಬಹಳವಾಗಿ ವ್ಯಥೆಪಟ್ಟು ಅತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)75 ಕೂಡಲೆ ಕೋಳಿ ಕೂಗಿತು. ಆಗ ಪೇತ್ರನು - ಕೋಳಿ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ ಎಂದು ಯೇಸು ಹೇಳಿದ ಮಾತನ್ನು ನೆನಸಿ ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್75 “ಆತನು ಯಾರೋ ನನಗೆ ಗೊತ್ತೇ ಇಲ್ಲ ಎಂಬುದಾಗಿ ಕೋಳಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಲ ಹೇಳುವೆ” ಎಂದು ತನಗೆ ಯೇಸು ಹೇಳಿದ್ದ ಮಾತನ್ನು ಪೇತ್ರನು ನೆನಪು ಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ75 ಆಗ ಪೇತ್ರನು, “ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ,” ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್75 ತನ್ನಾ ಪೆದ್ರುಕ್ ಜೆಜುನ್ “ಕೊಂಬೊ ಭೊಕುಚ್ಯಾ ಅದ್ದಿ ತಿನ್‍ದಾ ತಿಯಾ ಮಾಜಿ ವಳಕುಚ್ ನಾ ಮನುನ್ ಸಾಂಗ್ತೆಯ್.” ಮನುನ್ ಸಾಂಗಲ್ಲಿ ಯಾದ್ ಯೆಲಿ. ತನ್ನಾ ತೊ ಭಾಯ್ರ್ ಗೆಲೊ ಅನಿ ಗಳ್ಗಳುನ್ ರಡ್ಲೊ. ಅಧ್ಯಾಯವನ್ನು ನೋಡಿ |