Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬೆಳಗಾಯಿತು. ಎಲ್ಲ ಮುಖ್ಯಯಾಜಕರೂ ಜನರ ಪ್ರಮುಖರೂ ಸೇರಿ ಯೇಸುವನ್ನು ಕೊಲ್ಲಿಸುವುದಕ್ಕೆ ಸಮಾಲೋಚನೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬೆಳಗಾಗಲು ಎಲ್ಲಾ ಮಹಾಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಆಲೋಚನೆ ಮಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮರುದಿನ ಮುಂಜಾನೆ, ಮಹಾಯಾಜಕರೆಲ್ಲರೂ ಮತ್ತು ಹಿರಿಯ ನಾಯಕರೆಲ್ಲರೂ ಯೇಸುವನ್ನು ಕೊಲ್ಲಲು ತೀರ್ಮಾನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬೆಳಗಾದಾಗ, ಎಲ್ಲಾ ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವುದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಸಕ್ಕಾಳಿ ಫಿಡೆ ಸಗ್ಳ್ಯಾ ಮುಖ್ಯ ಯಾಜಕಾನಿ ಅನಿ ಜುದೆವ್ ಲೊಕಾಂಚ್ಯಾ ಜಾನ್ತ್ಯಾನಿ ಮಿಳುನ್ ಜೆಜುಕ್ ಕಶೆ ಜಿವಾನಿ ಮಾರ್‍ತಲೆ ಮನುನ್ ಯವ್ಜನ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:1
16 ತಿಳಿವುಗಳ ಹೋಲಿಕೆ  

ಬೆಳಗಾದ ಕೂಡಲೆ ಮುಖ್ಯಯಾಜಕರೂ, ಹಿರಿಯರೂ, ಶಾಸ್ತ್ರಿಗಳೂ, ಹಿರೀಸಭೆಯ ಸದಸ್ಯರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ಕರೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.


ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.


ಬೆಳಗಾಗುವಾಗ ಯೆಹೂದ್ಯರ ಹಿರೀಸಭೆಯವರು, ಮುಖ್ಯಯಾಜಕರು ಮತ್ತು ಶಾಸ್ತ್ರಿಗಳು ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು,


ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ, ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ. ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೇ.


ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು.


ಸೌಲನು ಕೂಡಲೇ ದೂತರನ್ನು ಕರಿಸಿ ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕೆಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, “ನೀನು ಈ ರಾತ್ರಿಯೇ ತಪ್ಪಿಸಿಕೊಳ್ಳದಿದ್ದರೆ ನಾಳೆ ಬೆಳಿಗ್ಗೆ ಹತನಾಗುವಿ” ಎಂದು ಹೇಳಿ


ಸಂಸೋನನು ಬಂದಿರುವುದು ಗಾಜದವರಿಗೆ ಗೊತ್ತಾಗಲು ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೆ ಅವನನ್ನು ಕೊಂದುಹಾಕೋಣ ಎಂದುಕೊಂಡು ರಾತ್ರಿಯೆಲ್ಲಾ ಊರುಬಾಗಲಲ್ಲಿ ಹೊಂಚಿನೋಡುತ್ತಾ ಸುಮ್ಮನಿದ್ದರು.


ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ.


ನನ್ನ ಜೀವಕ್ಕೆ ಹೊಂಚುಹಾಕುವ ವೈರಿಗಳು ಒಟ್ಟಾಗಿ ಆಲೋಚಿಸುತ್ತಾ,


ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು, ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು