Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಕಾಲದಲ್ಲಿ ಬರಬ್ಬನೆಂಬ ಕುಖ್ಯಾತನಾದ ಒಬ್ಬ ಸೆರೆಯವನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಬರಬ್ಬನೆಂಬ ಕುಪ್ರಸಿದ್ಧ ಕೈದಿಯೊಬ್ಬನು ಸೆರೆಯಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ಕಾಲದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಒಬ್ಬ ಸೆರೆಯವನು ಸಿಕ್ಕಿಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ಕಾಲದಲ್ಲಿ ಪ್ರಸಿದ್ಧನಾದ ಕೈದಿಯೊಬ್ಬನು ಸೆರೆಮನೆಯಲ್ಲಿದ್ದನು. ಅವನ ಹೆಸರು ಬರಬ್ಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧ ಸೆರೆಯಾಳು ಅವರಲ್ಲಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತ್ಯಾ ಎಳಾರ್ ಸಗ್ಳ್ಯಾಕ್ನಿ ಗೊತ್ತ್ ಹೊತ್ತೊ ಬಾರಾಬ್ಬಾಸ್ ಮನ್ತಲೊ ಎಕ್ ಮಾನುಸ್ ಬಂಧಿಖಾನ್ಯಾತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:16
9 ತಿಳಿವುಗಳ ಹೋಲಿಕೆ  

ಅಲ್ಲಿ ಬರಬ್ಬನೆಂಬುವನೊಬ್ಬನಿದ್ದನು; ಇವನನ್ನು ದಂಗೆಯಲ್ಲಿ ಕೊಲೆ ಮಾಡಿದ ದಂಗೆಗಾರರೊಂದಿಗೆ ಬಂಧಿಸಿದ್ದರು.


ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.


ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.


ಅದಕ್ಕೆ ಅವರೆಲ್ಲರೂ, “ಆತನನ್ನು ಬೇಡ ನಮಗೆ ಬರಬ್ಬನನ್ನು ಬಿಟ್ಟುಕೊಡಬೇಕು” ಎಂದು ಪುನಃ ಕೂಗಿಕೊಂಡರು. ಈ ಬರಬ್ಬನು ದರೋಡೆಗಾರನಾಗಿದ್ದನು.


ದಂಗೆ ಕೊಲೆಗಳ ನಿಮಿತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು, ಯೇಸುವನ್ನು ಅವರ ಚಿತ್ತಾನುಸಾರ ದಂಡಿಸಲು ಒಪ್ಪಿಸಿದನು.


ಆದರೆ ಆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವುದು ದೇಶಾಧಿಪತಿಯ ಪದ್ಧತಿಯಾಗಿತ್ತು.


ಹೀಗಿರಲಾಗಿ ಅವರು ಸೇರಿಬಂದಿದ್ದ ಸಮಯದಲ್ಲಿ ಪಿಲಾತನು, “ನಿಮಗೆ ಯಾರನ್ನು ಬಿಟ್ಟುಕೊಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಅವರನ್ನು ಕೇಳಿದನು.


ನನ್ನ ಸ್ವಜನರೂ ಹಾಗೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ, ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರಲ್ಲದೆ, ನನಗಿಂತ ಮೊದಲೇ ಕ್ರಿಸ್ತನನ್ನು ನಂಬಿದವರೂ ಆಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು