Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದಲ್ಲದೆ ಅವನು ನ್ಯಾಯಾಸನದಲ್ಲಿ ಕೂತಿರುವಾಗ ಅವನ ಹೆಂಡತಿಯು - ನೀನು ಆ ಸತ್ಪುರುಷನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು ಎಂದು ಅವನ ಬಳಿಗೆ ಹೇಳಿ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪಿಲಾತನು ನ್ಯಾಯಸ್ಥಾನದಲ್ಲಿ ಕುಳಿತುಕೊಂಡಿದ್ದಾಗ ಅವನ ಪತ್ನಿಯು ಒಂದು ಸಂದೇಶವನ್ನು ಕಳುಹಿಸಿದ್ದಳು. “ಆ ಮನುಷ್ಯನಿಗೆ ಏನನ್ನೂ ಮಾಡಬೇಡ. ಅವನು ತಪ್ಪಿತಸ್ಥನಲ್ಲ. ಆತನ ನಿಮಿತ್ತ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ” ಎಂಬುದೇ ಆ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಪಿಲಾತನು ನ್ಯಾಯಾಸನದ ಮೇಲೆ ಕೂತಿದ್ದಾಗ, ಅವನ ಹೆಂಡತಿಯು ಅವನಿಗೆ, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ. ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ,” ಎಂದು ಹೇಳಿ ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಪಿಲಾತ್ ನ್ಯಾಯ್‍ ಕರ್‍ತಲ್ಯಾ ಜಾಗ್ಯಾರ್ ಬಸಲ್ಲೊ ಹೊತ್ತೊ ತನ್ನಾ ತೆಚ್ಯಾ ಬಾಯ್ಕೊನ್,“ತಿಯಾ ತ್ಯಾ ಚುಕೆತ್ ನಸಲ್ಲ್ಯಾ ಮಾನ್ಸಾಕ್ ಕಾಯ್ಬಿ ಕರುಕ್ ಜಾವ್‍ನಕೊ, ಕಶ್ಯಾಕ್ ಮಟ್ಲ್ಯಾರ್ ರಾತ್ತಿ ಸಪ್ನಾತ್ ಮಿಯಾ ಹೆಚ್ಯಾ ಬದಲ್ ಲೈ ಕಾಯ್ ಕಾಯ್‍ಕಿ ಸೊಸ್ಲಾ” ಮನುನ್ ಖಬರ್ ಧಾಡುನ್ ದಿಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:19
28 ತಿಳಿವುಗಳ ಹೋಲಿಕೆ  

ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು


ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.


ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, “ಕಲ್ಲು ಹಾಸಿದ ಕಟ್ಟೆ” ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು.


ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ, “ಈ ಮನುಷ್ಯನು ನಿಜವಾಗಲೂ ನೀತಿವಂತನೇ” ಆಗಿದ್ದನು ಎಂದು ದೇವರನ್ನು ಕೊಂಡಾಡಿದನು.


ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.


“ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು.


ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು.


ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು,


ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.


ನಿಮಗೆ ಕೇಡುಮಾಡುವುದಕ್ಕೆ ನನ್ನಲ್ಲಿ ಸಾಮರ್ಥ್ಯ ಇದೆ. ಆದರೆ ಕಳೆದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು, ‘ಯಾಕೋಬನಿಗೆ ಒಳ್ಳೆಯದನ್ನಾಗಲೀ, ಕೆಟ್ಟದನ್ನಾಗಲಿ ಹೇಳದ ಹಾಗೆ ಎಚ್ಚರವಾಗಿರು’ ಎಂದು ಹೇಳಿದನು.


ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು” ಎಂದನು.


ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ,


ಆ ಕನಸಿನಲ್ಲಿ ದೇವದೂತನು, ‘ಯಾಕೋಬನೇ’ ಎಂದು ಕರೆಯಲು ನಾನು, ‘ಇದ್ದೇನೆ’ ಎಂದು ಹೇಳಿದಾಗ


ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು.


ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು.


ಗಲ್ಲಿಯೋನನು ಅಖಾಯ ಪ್ರಾಂತ್ಯಕ್ಕೆ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಾಸ್ಥಾನದ ಮುಂದೆ ಹಿಡಿದು ತಂದು;


ಅವರನ್ನು ನ್ಯಾಯಾಸ್ಥಾನದ ಸ್ಥಳದಿಂದ ಹೊರಡಿಸಿಬಿಟ್ಟನು.


ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.


ಅವನು ಯೆರುಸಲೇಮಿನಲ್ಲಿ ಎಂಟು ಹತ್ತಕ್ಕಿಂತ ಹೆಚ್ಚು ದಿನಗಳು ನಿಲ್ಲದೆ ಕೈಸರೈಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು, ಪೌಲನನ್ನು ಕರತರಬೇಕೆಂದು ಅಪ್ಪಣೆಮಾಡಿದನು.


“ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.


ಅವರು ಇಲ್ಲಿಗೆ ಕೂಡಿಬಂದಾಗ ನಾನು ಸ್ವಲ್ಪವೂ ತಡಮಾಡದೆ ಮರುದಿನವೇ ನ್ಯಾಯಸ್ಥಾನದ ಮೇಲೆ ಕುಳಿತುಕೊಂಡು ಆ ಮನುಷ್ಯನನ್ನು ಕರತರಬೇಕೆಂದು ಅಪ್ಪಣೆಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು