Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅದಕ್ಕೆ ಜನರೆಲ್ಲರೂ, “ಅವನ ರಕ್ತ ನಮ್ಮ ಮೇಲೂ ನಮ್ಮ ಮಕ್ಕಳ ಮೇಲೂ ಇರಲಿ,” ಎಂದು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವನನ್ನು ಕೊಲ್ಲಿಸಿದ್ದಕ್ಕೆ ನಾವೂ ನಮ್ಮ ಮಕ್ಕಳೂ ಉತ್ತರ ಕೊಡುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಜನರೆಲ್ಲರೂ, “ಅವನ ಸಾವಿಗೆ ನಾವೇ ಜವಾಬ್ದಾರರು. ಅವನ ಸಾವಿಗೆ ಏನಾದರೂ ದಂಡನೆಯಿದ್ದರೆ ಅದನ್ನು ನಾವು ಮತ್ತು ನಮ್ಮ ಮಕ್ಕಳು ಅನುಭವಿಸುತ್ತೇವೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅದಕ್ಕೆ ಜನರೆಲ್ಲರೂ ಉತ್ತರವಾಗಿ, “ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತನ್ನಾ ಸಗ್ಳ್ಯಾ ಲೊಕಾನಿ,“ಹೆಚ್ಯಾ ಮರ್‍ನಾಚಿ ಜವಾಬ್ದಾರಿ ಅಮ್ಚ್ಯಾ ವರ್‍ತಿ ಅನಿ ಅಮ್ಚ್ಯಾ ಪೊರಾಂಚ್ಯಾ ವರ್‍ತಿ ಪಡುಂದಿತ್!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:25
20 ತಿಳಿವುಗಳ ಹೋಲಿಕೆ  

ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ಅವರ ಮರಣಕ್ಕೆ ಅವರೇ ಕಾರಣರು; ಅದಕ್ಕೆ ನಾವು ಹೊಣೆಗಾರರಲ್ಲ. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಯಾರಾದರೂ ಕೈ ಮಾಡಿದ್ದಾದರೆ ಆ ರಕ್ತಾಪರಾಧವು ನಮ್ಮ ತಲೆಯ ಮೇಲೆ ಇರುವುದು.


“ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.


ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.


ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗದಂತೆ; ಆ ದೋಷವು ನಿಮ್ಮದಾಗದಂತೆ ನೀವು ಹೀಗೆ ಮಾಡಬೇಕು.


“‘ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೇ ತನಗಿಂತ ಉತ್ತಮರೂ ಮತ್ತು ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಎಂದರೆ ಇಸ್ರಾಯೇಲ್ ಸೇನಾಧಿಪತಿಯೂ, ನೇರನ ಮಗನೂ ಆದ ಅಬ್ನೇರನನ್ನೂ, ಯೆಹೂದ ಸೇನಾಧಿಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕತ್ತಿಯಿಂದ ಕೊಂದನಲ್ಲಾ.


ದಾವೀದನು, “ಈ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ. ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು” ಅಂದನು.


ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನನ್ನು ಇಸ್ರಾಯೇಲರಲ್ಲಿ ಉಳಿಯದಂತೆ ಮಾಡಬೇಕು.


ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.


ಈ ಕಲ್ಲಿನ ಮೇಲೆ ಬೀಳುವವನು ತುಂಡು ತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅದು ಅವನನ್ನು ಪುಡಿಪುಡಿ ಮಾಡುವುದು” ಎಂದು ಹೇಳಿದನು.


ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು