Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸೈನಿಕರು ಯೇಸುಸ್ವಾಮಿಯನ್ನು ಕರೆದುಕೊಂಡು ಊರಹೊರಗೆ ಹೋಗುತ್ತಿದ್ದಾಗ ಸಿರೇನ್ ಪಟ್ಟಣದ ಸಿಮೋನ್ ಎಂಬಾತನನ್ನು ಕಂಡರು. ಯೇಸುವಿನ ಶಿಲುಬೆಯನ್ನು ಹೊತ್ತುಬರುವಂತೆ ಅವನನ್ನು ಬಲವಂತಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬವನನ್ನು ಕಂಡು ಅವನನ್ನು ಆತನ ಶಿಲುಬೆಯನ್ನು ಹೊರುವದಕ್ಕೆ ಬಿಟ್ಟೀಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಸೈನಿಕರು ಯೇಸುವಿನೊಂದಿಗೆ ನಗರದಿಂದ ಹೊರಕ್ಕೆ ಹೋಗುತ್ತಿರುವಾಗ ಸಿರೇನ ಪಟ್ಟಣದ “ಸಿಮೋನ” ಎಂಬ ವ್ಯಕ್ತಿಯನ್ನು ಕಂಡರು. ಆತನ ಶಿಲುಬೆ ಹೊರುವುದಕ್ಕಾಗಿ ಅವರು ಅವನನ್ನು ಬಲವಂತಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರು ಹೊರಗೆ ಹೋಗುತ್ತಿರುವಾಗ, ಕುರೇನೆ ಗ್ರಾಮದ ಸೀಮೋನನೆಂಬ ಮನುಷ್ಯನನ್ನು ಕಂಡು, ಯೇಸುವಿನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತೆನಿ ಶಾರಾತ್ನಾ ಭಾಯ್ರ್ ಗೆಲ್ಲ್ಯಾ ತನ್ನಾ ಸಿರೆನ್ ಮನ್ತಲ್ಯಾ ಶಾರಾಚೊ ಸಿಮಾವ್ ಮನ್ತಲೊ ಎಕ್ ಮಾನುಸ್ ತೆಂಕಾ ಗಾವ್ಲೊ. ಸೈನಿಕಾನಿ ತೆಕಾ ‍ಜಬರ್‍ದಸ್ತಿನಿ ಜೆಜುಚೊ ಕುರಿಸ್ ವಾವುನ್ ನ್ಹೆವ್ಕ್ ಲಾವ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:32
17 ತಿಳಿವುಗಳ ಹೋಲಿಕೆ  

ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವುದಕ್ಕೆ ಒತ್ತಾಯಪಡಿಸಿದರು. ಅವನು ಯಾರೆಂದರೆ, ಅಲೆಕ್ಸಾಂದ್ರ ಹಾಗೂ ರೂಫ ಎಂಬುವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು.


ಅವರು ಯೇಸುವನ್ನು ಕರೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ, ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕರೆದು, ಶಿಲುಬೆಯನ್ನು ಅವನ ಮೇಲೆ ಹೊರಿಸಿ ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು.


ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.


ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ


ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.


ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು.


ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಕರುಳುಗಳು, ಕರುಳುಗಳಲ್ಲಿರುವ ಕಲ್ಮಷ ಇವುಗಳನ್ನೆಲ್ಲಾ ಪಾಳೆಯದ ಹೊರಗೆ ಯಜ್ಞವೇದಿಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.


ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು.


ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ.


ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.


ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.


ಒಬ್ಬನು ಒಂದು ಮೈಲು ದೂರ ಬಾ ಎಂದು ನಿನ್ನನ್ನು ಒತ್ತಾಯಿಸಿದರೆ ಅವನ ಸಂಗಡ ಎರಡು ಮೈಲು ದೂರ ಹೋಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು