Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ದೇವರಲ್ಲಿ ಭರವಸೆಯಿಟ್ಟಿದ್ದ; ತಾನು ‘ದೇವರ ಪುತ್ರ’ ಎಂದು ಹೇಳಿಕೊಳ್ಳುತ್ತಿದ್ದ; ದೇವರಿಗೆ ಇಷ್ಟವಾದವನು ಇವನಾಗಿದ್ದರೆ ದೇವರೇ ಬಂದು ಇವನನ್ನು ಬಿಡುಗಡೆಮಾಡಲಿ,” ಎಂದು ಅಪಹಾಸ್ಯಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರು ಅವನಲ್ಲಿ ಇಷ್ಟಪಟ್ಟರೆ ಈಗ ಅವನನ್ನು ಬಿಡಿಸಲಿ; ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ ಎಂದು ಹಾಸ್ಯದಿಂದ ಮಾತಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಇವನು ದೇವರನ್ನು ನಂಬಿದ್ದನು. ಈಗ ದೇವರಿಗೆ ನಿಜವಾಗಿಯೂ ಇವನು ಬೇಕಿದ್ದರೆ, ದೇವರೇ ಇವನನ್ನು ಕಾಪಾಡಲಿ. ‘ನಾನು ದೇವರ ಮಗನು’ ಎಂದು ಇವನೇ ಹೇಳಿಕೊಂಡನಲ್ಲಾ” ಎಂದು ಅವರು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಈತನು ದೇವರಲ್ಲಿ ಭರವಸೆ ಇಟ್ಟಿದ್ದಾನೆ. ದೇವರಿಗೆ ಈತನಲ್ಲಿ ಇಷ್ಟವಿದ್ದರೆ, ದೇವರೇ ಈತನನ್ನು ಈಗ ಬಿಡಿಸಲಿ, ಏಕೆಂದರೆ ಈತನು, ‘ನಾನು ದೇವಪುತ್ರನು’ ಎಂದು ಹೇಳಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ತೊ ದೆವಾ ವರ್‍ತಿ ಹೊಂದುನ್ ರ್‍ಹಾತಾ ಅನಿ ಅಪ್ನಿಚ್ ದೆವಾಚೊ ಲೆಕ್ ಮನುನ್ ಘೆತಾ. ತಸೆಹೊಲ್ಯಾರ್ ದೆವ್ ಯೆವ್ನ್ ತೆಕಾ ಅತ್ತಾ ಹುರ್‍ವುತಾ ಕಾಯ್ ಮನುನ್ ಅಮಿಬಿ ಬಗ್ತಾವ್‍!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:43
17 ತಿಳಿವುಗಳ ಹೋಲಿಕೆ  

“ಯೆಹೋವನು ತನ್ನನ್ನು ರಕ್ಷಿಸುವನೆಂದು ಆತನಲ್ಲಿ ಭರವಸವಿಟ್ಟಿದ್ದಾನಲ್ಲಾ; ಆತನು ಇವನನ್ನು ಮೆಚ್ಚಿದ್ದಾದರೆ ರಕ್ಷಿಸಲಿ” ಎಂದು ಹೇಳುತ್ತಾರೆ.


ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’


ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.


ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು.


“ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು.


“ಹಿಜ್ಕೀಯನೇ, ನೀನು ನಂಬುವ ದೇವರು, ‘ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವುದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.’


“ಯೆಹೋವನು ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಹುಟ್ಟಿಸಾನು ನೋಡಿಕೊಳ್ಳಿರಿ. ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ಕಾಪಾಡಿತು?


ಹಿಜ್ಕೀಯನು ನಿಮಗೆ, ‘ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೋ ರಕ್ಷಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ’” ಎಂಬುದಾಗಿ ಹೇಳಿದರೆ,


“ದೇವರು ಅವನನ್ನು ಕೈಬಿಟ್ಟಿದ್ದಾನೆ; ಬೆನ್ನಟ್ಟಿ ಹಿಡಿಯಿರಿ; ಬಿಡಿಸುವವರು ಯಾರೂ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ.


ನನ್ನ ವಿರೋಧಿಗಳು, “ನಿನ್ನ ದೇವರು ಎಲ್ಲಿ?” ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.


ನೀವು ಕುಗ್ಗಿದವರ ಸಂಕಲ್ಪವನ್ನು ಭಂಗಪಡಿಸಿದರೂ ಯೆಹೋವನು ಅವರ ಆಶ್ರಯವಲ್ಲವೇ.


ಅನೇಕರು ನನ್ನ ವಿಷಯದಲ್ಲಿ, “ಅವನಿಗೆ ದೇವರಿಂದ ಸಹಾಯವು ಆಗುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. ಸೆಲಾ


ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.


ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು.


“ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನು ರಕ್ಷಿಸಿಕೋ” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು