Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಆಗ ಇಗೋ, ಮಹಾದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೆ ಇಬ್ಭಾಗವಾಗಿ ಸೀಳಿಹೋಯಿತು; ಭೂಮಿ ನಡುಗಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಆಗ ಇಗೋ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಆಗ ದೇವಾಲಯದ ತೆರೆಯು ಮೇಲ್ಗಡೆಯಿಂದ ತಳಭಾಗದವರೆಗೂ ಹರಿದು ಎರಡು ಭಾಗವಾಯಿತು. ಭೂಮಿಯು ನಡುಗಿತು. ಬಂಡೆಗಳು ಒಡೆದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಅದೇ ಸಮಯದಲ್ಲಿ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು. ಭೂಮಿಯು ಕಂಪಿಸಿತು. ಬಂಡೆಗಳು ಸೀಳಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ತನ್ನಾ ದೆವಾಚ್ಯಾ ಗುಡಿತ್ ಭಾಂದಲ್ಲೊ ಫಡ್ದೊ ವೈನಾ ಖಾಯ್ಲ್ ಪತರ್ ಪಿಂಜುನ್ ದೊನ್ ಭಾಗ್ ಹೊಲೊ. ಸಗ್ಳಿ ಜಿಮಿನ್ ಹಾಲ್ಲಿ ಅನಿ ಮೊಟ್ಯಾ-ಮೊಟ್ಯಾ ಗುಂಡ್ಯಾಕ್ನಿ ಬಿರ್‍ಕಾ ಪಡ್ಲ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:51
26 ತಿಳಿವುಗಳ ಹೋಲಿಕೆ  

ಆಗ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು.


ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ ಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ.


ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.


ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.


ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.


ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ, ಸಕಲ ದೇಶದವರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವನು.


ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು.


ಮತ್ತು ಎರಡನೆಯ ಪರದೆಯ ಹಿಂದೆ ಇನ್ನೊಂದು ಕೋಣೆಗೆ, ಅತಿ ಪವಿತ್ರ ಸ್ಥಳ ಎಂದು ಕರೆಯಲಾಗುತ್ತಿತು.


ಬೆಟ್ಟಗಳು ನಿನ್ನನ್ನು ನೋಡಿ ತಳಮಳಗೊಳ್ಳುತ್ತಿವೆ; ಪ್ರವಾಹದೋಪಾದಿಯಲ್ಲಿ ಆಕಾಶವು ಮಳೆಗರೆಯುತ್ತಿದೆ; ಸಾಗರವು ಆರ್ಭಟಿಸಿ ಅಲೆಗಳನ್ನು ಮೇಲಕ್ಕೆ ಎತ್ತುತ್ತದೆ.


ಸೊಲೊಮೋನನು ಪರದೆಯನ್ನು ನೀಲ, ಧೂಮ್ರ, ರಕ್ತವರ್ಣಗಳುಳ್ಳ ನಯವಾದ ನಾರಿನಿಂದ ಮಾಡಿಸಿದನು. ಅದರಲ್ಲಿ ಕೆರೂಬಿಗಳ ಕಸೂತಿಯನ್ನು ಹಾಕಿಸಿದನು.


ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.


ನಿನ್ನ ಅಭಿಷಿಕ್ತನಿಗಾಗಿಯೂ ಮತ್ತು ನಿನ್ನ ಪ್ರಜೆಯ ರಕ್ಷಣೆಗಾಗಿಯೂ ನೀನು ಯಾವಾಗಲೂ ಮುಂದಾಗಿರುತ್ತಿ; ದುಷ್ಟರ ಮನೆಯ ಮುಖ್ಯಸ್ಥರನ್ನು ಸದೆಬಡೆದು ಅವರ ಕುಟುಂಬಗಳನ್ನು ಬುಡಸಮೇತವಾಗಿ ಜನರ ಮುಂದೆ ಬೆತ್ತಲೆಯಾಗಿ ಮಾಡುವಿ. ಸೆಲಾ.


ಆಗ ಯೆಹೋವನೇ, ನಿನ್ನ ಗದರಿಕೆಯಿಂದಲೂ, ನಿನ್ನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ತಿವಾರಗಳು ಕಂಡುಬಂದವು.


ಆಗ ಆತನಿಗೆ ಸಿಟ್ಟೇರಿದ್ದರಿಂದ, ಭೂಮಿಯು ಗಡಗಡನೆ ಕಂಪಿಸಿತು, ಪರ್ವತಗಳ ಬುಡಗಳು ನಡುಗಿ ಕದಲಿದವು.


“ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.


ಮೋಶೆಯು ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ಪರದೆಯನ್ನು ಇರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.


ದಂಡು ಹೊರಡುವಾಗ, ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಬಂದು ಮಹಾಪವಿತ್ರಸ್ಥಾನವನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಮಂಜೂಷದ ಆಜ್ಞಾಶಾಸನವನ್ನು ಮುಚ್ಚಿಬಿಟ್ಟು,


ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ, “ಈ ಮನುಷ್ಯನು ನಿಜವಾಗಲೂ ನೀತಿವಂತನೇ” ಆಗಿದ್ದನು ಎಂದು ದೇವರನ್ನು ಕೊಂಡಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು