Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:52 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಬಂಡೆಗಳು ಸಿಡಿದವು; ಸಮಾಧಿಗಳು ತೆರೆದುಕೊಂಡವು. ನಿಧನಹೊಂದಿದ್ದ ಅನೇಕ ಭಕ್ತರ ದೇಹಗಳು ಜೀವಂತವಾಗಿ ಎದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಭೂವಿುಯು ಅದರಿತು; ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ದೆಹೋಗಿದ್ದ ಅನೇಕ ಭಕ್ತರ ದೇಹಗಳು ಎದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಸಮಾಧಿಗಳು ತೆರೆದವು, ಸತ್ತುಹೋಗಿದ್ದ ಅನೇಕ ದೇವಜನರು ಸಮಾಧಿಗಳೊಳಗಿಂದ ಜೀವಂತವಾಗಿ ಮೇಲೆದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಇದಲ್ಲದೆ ಸಮಾಧಿಗಳು ತೆರೆದುಕೊಂಡವು. ಮರಣ ಹೊಂದಿದ ಅನೇಕ ಭಕ್ತರ ದೇಹಗಳು ಎದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ಸಾರಿಯಾ ಫುಟುನ್ ಉಗಡ್ಲ್ಯಾ, ಅನಿ ಸುಮಾರ್ ಮರಲ್ಲಿ ದೆವಾಚಿ ಲೊಕಾ ಝಿತ್ತಿ ಹೊವ್ನ್ ಉಟ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:52
13 ತಿಳಿವುಗಳ ಹೋಲಿಕೆ  

ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.


ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.


ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು.


ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.


ನಾವು ಎಚ್ಚರವಾಗಿದ್ದರೂ ಸರಿಯೇ ಅಥವಾ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಯೇಸು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟನು.


ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು.


ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರು ಮತ್ತು ರೋಗಿಗಳು ಆಗುತ್ತಾರೆ ಮತ್ತು ಅನೇಕರು ಸಾಯುತ್ತಾರೆ.


ಮೊಣಕಾಲೂರಿ, “ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು” ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿ ನಿದ್ರೆಹೋದನು.


ಒಂದು ದಿನ ಜನರು ಒಬ್ಬ ಸತ್ತವನನ್ನು ಸಮಾಧಿಮಾಡುವುದಕ್ಕೆ ಹೋದಾಗ, ಮೋವಾಬ್ಯರ ಗುಂಪು ಬರುತ್ತಿರುವುದನ್ನು ಕಂಡು ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಸತ್ತ ಮನುಷ್ಯನ ದೇಹವು ಎಲೀಷನ ಎಲುಬುಗಳಿಗೆ ತಗಲಿದ ಕೂಡಲೆ ಅವನು ಜೀವ ಬಂದು ಎದ್ದು ನಿಂತನು.


ಇದನ್ನು ಹೇಳಿದ ಮೇಲೆ ಆತನು ಅವರಿಗೆ, “ನಮ್ಮ ಮಿತ್ರನಾದ ಲಾಜರನು ನಿದ್ರೆ ಮಾಡುತ್ತಿದ್ದಾನೆ, ಆದುದರಿಂದ ನಾನು ಹೋಗಿ ಅವನನ್ನು ನಿದ್ರೆಯಿಂದ ಎಬ್ಬಿಸಬೇಕಾಗಿದೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು