Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:63 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

63 “ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

63 “ಸ್ವಾಮೀ, ಆ ಮೋಸಗಾರ ಬದುಕಿದ್ದಾಗ, ‘ಮೂರು ದಿನಗಳಾದ ಮೇಲೆ ನಾನು ಪುನರ್ಜೀವಂತನಾಗಿ ಏಳುವೆನು,’ ಎಂದು ಹೇಳಿದ್ದು ನಮಗೆ ಜ್ಞಾಪಕದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

63 ದೊರೆಯೇ, ಆ ಮೋಸಗಾರನು ಬದುಕಿದ್ದಾಗ ತಾನು ಮೂರು ದಿನದ ಮೇಲೆ ಏಳುತ್ತೇನೆ ಅಂತ ಹೇಳಿದ್ದು ನಮ್ಮ ನೆನಪಿಗೆ ಬಂತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

63 “ಸ್ವಾಮೀ, ಆ ಸುಳ್ಳುಗಾರನು ಬದುಕಿದ್ದಾಗ, ‘ಮೂರು ದಿನಗಳ ಬಳಿಕ ನಾನು ಪುನರುತ್ಥಾನ ಹೊಂದುತ್ತೇನೆ’ ಎಂದು ಹೇಳಿದ್ದು ನಮಗಿನ್ನೂ ನೆನಪಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

63 “ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿರುವಾಗ, ‘ಮೂರು ದಿನಗಳಾದ ಮೇಲೆ ನಾನು ತಿರುಗಿ ಏಳುವೆನು,’ ಎಂದು ಹೇಳಿದ್ದು ನಮಗೆ ನೆನಪಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

63 ಅನಿ, “ಸಾಯ್ಬಾನು, ಅಮ್ಕಾ ಯಾದ್ ಹಾಯ್ ತೊ ಝುಟೊ ಮಾನುಸ್ ಝಿತ್ತೊ ರ್‍ಹಾತಾನಾ, ತಿನ್ ದಿಸಾಂಚ್ಯಾ ಮಾನಾ ಮಿಯಾ ಝಿತ್ತೊ ಹೊವ್ನ್ ಉಟುನ್ ಯೆತಾ.” ಮನುನ್ ಸಾಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:63
18 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು.


ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.


ಅದಕ್ಕೆ ಯೇಸು “ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು” ಎಂದು ಉತ್ತರಕೊಟ್ಟನು.


ಕೊರಡೆಗಳಿಂದ ಹೊಡೆಯುವರು, ಕೊಲ್ಲುವರು ಮತ್ತು ಮೂರನೆಯ ದಿನದಲ್ಲಿ ಅವನು ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.


ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.


ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.


ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು.


ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.


“ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ತಿರುಗಿ ಕಟ್ಟಬಲ್ಲೆನೆಂದು ‘ಈ ಮನುಷ್ಯನು ಹೇಳಿದನು’” ಅಂದರು;


ನಾವು ಮಾನ ಮತ್ತು ಅವಮಾನ, ಕೀರ್ತಿ ಮತ್ತು ಅಪಕೀರ್ತಿಗಳಲ್ಲಿಯೂ ಸೇವೆಮಾಡಿದ್ದೇವೆ. ಸತ್ಯವಂತರಾದರೂ ಮೋಸಗಾರರೆನಿಸಿಕೊಂಡಿದ್ದೇವೆ.


ಜನರು ಗುಂಪುಗಳಲ್ಲಿ ಆತನ ವಿಷಯವಾಗಿ ಗೊಣಗುಟ್ಟುತಿದ್ದರು. ಕೆಲವರು “ಆತನು ಒಳ್ಳೆಯ ಮನುಷ್ಯನು” ಎಂದರು, ಇನ್ನು ಕೆಲವರು “ಇಲ್ಲ ಆತನು ಜನರಿಗೆ ಮೋಸ ಮಾಡುತ್ತಾನೆ” ಎಂದರು.


“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.


ಆಗ ಫರಿಸಾಯರು ಅವರಿಗೆ “ನೀವೂ ಸಹ ಆತನ ಮಾತಿಗೆ ಮರುಳಾದೀರಾ?


ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವುದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ” ಎಂದು ಹೇಳಾರು; ಆಗ ಮೊದಲನೆಯ ವಂಚನೆಗಿಂತ ಕಡೆಯ ವಂಚನೆಯು ಕೆಡುಕಾದೀತು ಅಂದರು.


ಆತನು ಇಲ್ಲಿ ಇಲ್ಲ, ತಾನು ಹೇಳಿದಂತೆಯೇ ಎದ್ದಿದ್ದಾನೆ. ಬನ್ನಿ, ಕರ್ತನು ಮಲಗಿದ್ದ ಸ್ಥಳವನ್ನು ನೋಡಿರಿ;


ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.


ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು