Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸೈನಿಕರು ಲಂಚವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟಂತೆಯೇ ಮಾಡಿದರು. ಈ ಕಟ್ಟುಕತೆ ಯೆಹೂದ್ಯರಲ್ಲಿ ಹಬ್ಬಿ ಇಂದಿನವರೆಗೂ ಪ್ರಚಲಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇವರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹಬ್ಬಿ ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸೈನಿಕರು ಹಣವನ್ನು ತೆಗೆದುಕೊಂಡು, ಅವರು ಹೇಳಿದಂತೆಯೇ ಮಾಡಿದರು. ಈ ಕಥೆಯು ಇಂದಿನವರೆಗೂ ಯೆಹೂದ್ಯರಲ್ಲಿ ಹಬ್ಬಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹೀಗೆ ಅವರು ಆ ಹಣವನ್ನು ತೆಗೆದುಕೊಂಡು ತಮಗೆ ಕಲಿಸಿದಂತೆ ವರದಿಮಾಡಿದರು. ಈ ಕಥೆಯು ಈ ದಿನದವರೆಗೂ ಯೆಹೂದ್ಯರಲ್ಲಿ ಹಬ್ಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತ್ಯಾ ರಾಕ್ವಾಲ್ಯಾನಿ ತೆ ಪೈಸೆ ಘೆಟ್ಲ್ಯಾನಿ ಅನಿ ತೆನಿ ತೆಂಕಾ ಸಾಂಗಲ್ಲ್ಯಾ ಸರ್ಕೆಚ್ ಕರ್‍ಲ್ಯಾನಿ. ತೆಚೆಸಾಟ್ನಿಚ್ ಅಜುನ್‍ಬಿ ಜುದೆವ್ ಲೊಕಾ ಹಿಚ್ ಖಬರ್ ಖರಿ ಮನುನ್ ಮಾನುನ್ ಘೆತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:15
5 ತಿಳಿವುಗಳ ಹೋಲಿಕೆ  

ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ “ಜೀವಹತ್ಯದ ಹೊಲವೆಂಬ” ಹೆಸರು ಇದೆ.


ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


“ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.


ಆದರೆ ಅವರು ಹೊರಟುಹೋಗಿ ಆ ದೇಶದೊಳಗೆಲ್ಲಾ ಆತನ ಸುದ್ದಿಯನ್ನು ಹಬ್ಬಿಸಿದರು.


ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು