Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹನ್ನೊಂದುಮಂದಿ ಶಿಷ್ಯರು ಗಲಿಲೇಯಕ್ಕೆ ಹೋದರು. ಯೇಸು ಸೂಚಿಸಿದ್ದ ಬೆಟ್ಟಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಬಳಿಕ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ ಯೇಸು ತಮಗೆ ಗೊತ್ತು ಮಾಡಿದ್ದ ಬೆಟ್ಟಕ್ಕೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೊರಟು ಯೇಸು ತಿಳಿಸಿದ್ದ ಬೆಟ್ಟಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಹನ್ನೊಂದು ಮಂದಿ ಶಿಷ್ಯರು ಯೇಸು ತಮಗೆ ನೇಮಿಸಿದ ಗಲಿಲಾಯದಲ್ಲಿರುವ ಬೆಟ್ಟಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅತ್ತಾ ಅಕ್ರಾ ಜಾನಾ ಶಿಸಾ ಗಾಲಿಲಿಯಾಕ್ ಜೆಜುನ್ ಯೆವ್ಕ್ ಸಾಂಗಲ್ಲ್ಯಾ ಮಡ್ಡಿ ವರ್‍ತಿ ಯೆವ್ನ್ ಪಾವ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:16
10 ತಿಳಿವುಗಳ ಹೋಲಿಕೆ  

“ಆದರೆ ನಾನು ಜೀವಿತನಾಗಿ ಎದ್ದ ಮೇಲೆ ನಿಮಗಿಂತ ಮೊದಲೇ ಗಲಿಲಾಯಕ್ಕೆ ಹೋಗುವೆನು” ಎಂದು ಹೇಳಿದನು.


ಆಗ ಯೇಸು ಅವರಿಗೆ, “ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು” ಎಂದು ಹೇಳಿದನು.


ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, ‘ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು, ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ’ ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,” ಎಂದು ಹೇಳಿದನು.


ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.


ಇದಲ್ಲದೆ ಸತ್ತವರು ಎದ್ದುಬರುವುದಿಲ್ಲವೆಂಬುದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು.


ಅದಕ್ಕೆ ಯೇಸು “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೇ? ಆದರೂ ನಿಮ್ಮಲ್ಲಿಯೂ ಒಬ್ಬನು ಸೈತಾನನಿದ್ದಾನೆ” ಎಂದನು.


ಆದರೂ ನಾನು ಸತ್ತು ಜೀವಿತನಾಗಿ ಎದ್ದಮೇಲೆ ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುವೆನು” ಎಂದು ಹೇಳಿದನು.


ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು