Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ನಿಮಗೆ ಆಜ್ಞಾಪಿಸಿದವುಗಳಿಗೆಲ್ಲಾ ವಿಧೇಯರಾಗುವಂತೆ ಜನರಿಗೆ ಉಪದೇಶಿಸಿ, ಲೋಕಾಂತ್ಯದವರೆಗೂ ಸದಾಕಾಲ ನಾನು ನಿಮ್ಮೊಂದಿಗಿರುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅನಿ ತೆಂಕಾ ಮಿಯಾ ತುಮ್ಕಾ ಸಾಂಗಲ್ಲ್ಯಾ ಸಗ್ಳ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊವ್ನ್ ಚಲುಕ್ ಶಿಕ್ವಾ, ಕನ್ನಾಬಿ ಮಿಯಾ ತುಮ್ಚ್ಯಾ ವಾಂಗ್ಡಾ ಹಾಂವ್. ಹ್ಯಾ ಜಗಾಚ್ಯಾ ಅಕ್ರಿ ಪತರ್‍ಬಿ ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹಾತಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:20
48 ತಿಳಿವುಗಳ ಹೋಲಿಕೆ  

ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ


ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.


“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”


ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.


ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.


ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.


ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.


ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮೀಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ.


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು


ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.


ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು.


ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.


ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ, “ಹಾಗೆಯೇ ಆಗಲಿ. ನನ್ನ ಒಡೆಯನಾದ ಅರಸನ ದೇವರಾದ ಯೆಹೋವನು ಅದನ್ನು ಸ್ಥಿರಪಡಿಸಲಿ.


ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.


ಇಸ್ರಾಯೇಲ್ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ” ಎಂದು ಹಾಡಿದರು. ಅವರು ಹೀಗೆ ಹಾಡಿದಾಗ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು.


ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.


ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ.


ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.


ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.


ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,


ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು


“ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ.


ನಾವು ಅರಣ್ಯದಲ್ಲಿ ಮೂರು ದಿನಗಳ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನು ಆಜ್ಞಾಪಿಸುವ ಪ್ರಕಾರ ಯಜ್ಞಮಾಡಬೇಕು” ಎಂದನು.


ಜನರು ಪ್ರವೇಶಿಸುವಾಗ ಅರಸನು ಅವರ ಮಧ್ಯದಲ್ಲಿ ಒಳಗೆ ಪ್ರವೇಶಿಸಲಿ. ಅವರು ಹೊರಗೆ ಹೋಗುವಾಗ ಅವರೂ ಹೊರಗೆ ಹೋಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು