Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, ‘ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು, ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ’ ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈಗ ಬೇಗನೆ ಹೋಗಿ, ಅವರ ಶಿಷ್ಯರಿಗೆ, ‘ಸತ್ತಿದ್ದವರು ಪುನರುತ್ಥಾನ ಹೊಂದಿದ್ದಾರೆ; ಅವರು ನಿಮಗಿಂತ ಮುಂಚಿತವಾಗಿ ಗಲಿಲೇಯಕ್ಕೆ ಹೋಗುವರು; ಅಲ್ಲೇ ಅವರನ್ನು ಕಾಣುವಿರಿ,’ ಎಂದು ತಿಳಿಸಿರಿ. ನಾನು ನಿಮಗೆ ತಿಳಿಸಬೇಕಾದ ಸಮಾಚಾರ ಇದೇ, ಮರೆಯದಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ - ಸತ್ತವನು ಬದುಕಿದ್ದಾನೆ, ಆತನು ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ; ನಾನು ನಿಮಗೆ ಹೇಳಿದ್ದೇನೆ, ನೋಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬೇಗನೆ ಹೋಗಿ ಆತನ ಶಿಷ್ಯರಿಗೆ, ‘ಯೇಸು ಪುನರುತ್ಥಾನ ಹೊಂದಿದ್ದಾನೆ. ಆತನು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ನಿಮಗಿಂತ ಮುಂಚೆಯೇ ಆತನು ಅಲ್ಲಿರುತ್ತಾನೆ. ನೀವು ಆತನನ್ನು ಅಲ್ಲಿ ನೋಡುತ್ತೀರಿ’ ಎಂದು ಹೇಳಿರಿ. ನಾನು ನಿಮಗೆ ತಿಳಿಸಬೇಕಾದ ಸಮಾಚಾರ ಇದೇ, ಮರೆಯದಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬೇಗನೆ ಹೋಗಿ ಅವರ ಶಿಷ್ಯರಿಗೆ, ‘ಅವರು ಮರಣದಿಂದ ಎದ್ದಿದ್ದಾರೆ. ಅವರು ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುತ್ತಾರೆ. ನೀವು ಅಲ್ಲಿಯೇ ಅವರನ್ನು ಕಾಣುವಿರಿ,’ ಎಂದು ತಿಳಿಸಿರಿ. ಇದೇ ನಾನು ನಿಮಗೆ ತಿಳಿಸಬೇಕಾದ ಸಂಗತಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅತ್ತಾ ಲಗ್ಗುನಾ ಜಾವಾ ಅನಿ ತೆಚ್ಯಾ ಶಿಸಾಕ್ನಿ ತೊ ಮರಲ್ಲೊ ಝಿತ್ತೊ ಹೊವ್ನ್ ಉಟ್ಲಾ ಮನುನ್ ಸಾಂಗಾ, ಅನಿ ತೊ ಅತ್ತಾ ತುಮ್ಚ್ಯಾನ್ಕಿ ಅದ್ದಿ ಗಾಲಿಲಿಯಾಕ್ ಜಾವ್ಕ್ ಲಾಗ್ಲಾ; ಥೈ ತುಮಿ ತೆಕಾ ಬಗ್ತ್ಯಾಶಿ! ಮಿಯಾ ತುಮ್ಕಾ ಸಾಂಗಲ್ಲೆ ಯಾದ್ ಥವ್ನ್ ಘೆವಾ. ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:7
20 ತಿಳಿವುಗಳ ಹೋಲಿಕೆ  

“ಆದರೆ ನಾನು ಜೀವಿತನಾಗಿ ಎದ್ದ ಮೇಲೆ ನಿಮಗಿಂತ ಮೊದಲೇ ಗಲಿಲಾಯಕ್ಕೆ ಹೋಗುವೆನು” ಎಂದು ಹೇಳಿದನು.


ಆಗ ಯೇಸು ಅವರಿಗೆ, “ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು” ಎಂದು ಹೇಳಿದನು.


ಆದರೆ ಅವರ ಕಾಲ ಬಂದಾಗ ಆತನು ನಮಗೆ ಇಂಥಿಂಥದ್ದನ್ನು ಹೇಳಿದನಲ್ಲಾ ಎಂದು ನಿಮ್ಮ ನೆನಪಿಗೆ ಬರುವಂತೆ, ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ.


ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು.


ಇದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ, ಅದು ನಡೆಯುವುದಕ್ಕಿಂತ ಮೊದಲೇ ನಿಮಗೆ ತಿಳಿಸಿದ್ದೇನೆ.


“ಕರ್ತನು ಎದ್ದದ್ದು ನಿಜ. ಆತನು ಸೀಮೋನನಿಗೆ ಕಾಣಿಸಿಕೊಂಡನು” ಎಂದು ಹೇಳುತ್ತಿದ್ದರು.


ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಶಿಷ್ಯರು ಅವರನ್ನೂ ನಂಬಲಿಲ್ಲ.


ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಅವರು ಶೋಕಿಸುತ್ತಾ ಅಳುತ್ತಿದ್ದರು.


ಆದರೂ ನಾನು ಸತ್ತು ಜೀವಿತನಾಗಿ ಎದ್ದಮೇಲೆ ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುವೆನು” ಎಂದು ಹೇಳಿದನು.


ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ.


ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.


ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”


ತರುವಾಯ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಜೀವಿಸುತ್ತಿದ್ದಾರೆ, ಆದರೆ ಕೆಲವರು ನಿದ್ರೆ ಹೋಗಿದ್ದಾರೆ.


ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು