Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹೃದಯ ಪರಿವರ್ತನೆಯ ಗುರುತಾಗಿ ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನ್ನ ನಂತರ ಬರುವ ಒಬ್ಬರು ನಿಮಗೆ ಪವಿತ್ರಾತ್ಮ ಹಾಗೂ ಅಗ್ನಿಯಿಂದ ದೀಕ್ಷಾಸ್ನಾನ ಕೊಡುವರು. ಅವರು ನನಗಿಂತಲೂ ಶಕ್ತರು. ಅವರ ಪಾದರಕ್ಷೆಗಳನ್ನು ಹೊರಲು ಸಹ ನಾನು ಅರ್ಹನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನಂತೂ ನಿಮ್ಮ ಮನಸ್ಸು ತಿರುಗಿಕೊಳ್ಳಬೇಕೆಂಬದಕ್ಕೆ ನಿಮಗೆ ನೀರಿನಲ್ಲಿ ಸ್ನಾನಮಾಡಿಸುತ್ತೇನೆ. ಆದರೆ ನನ್ನ ಹಿಂದೆ ಬರುವವನು ನನಗಿಂತ ಶಕ್ತನು; ಆತನ ಕೆರಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದಕ್ಕೆ ಗುರುತಾಗಿ ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವೆನು. ಆದರೆ ನನ್ನ ಹಿಂದೆ ಬರುವವನು ನನಗಿಂತ ಹೆಚ್ಚಿನವನು. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ನಾನಂತೂ ದೇವರ ಕಡೆಗೆ ತಿರುಗಿಕೊಂಡಿದ್ದಕ್ಕಾಗಿ ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ. ಆದರೆ ನನ್ನ ಬಳಿಕ ಬರುವವರು ನನಗಿಂತಲೂ ಶಕ್ತರು, ಅವರ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ. ಅವರಾದರೋ ಪವಿತ್ರಾತ್ಮರಲ್ಲಿಯೂ ಅಗ್ನಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತುಮಿ ಪಾಪ್ ಕರ್‍ತಲೆ ಸೊಡ್ಲ್ಯಾಶಿ ಮನುನ್ ಎಕ್ ವಳಕ್ ಮನುನ್ ಮಿಯಾ ತುಮ್ಕಾ ಪಾನಿಯಾನ್ ಬಾಲ್ತಿಮ್ ದಿವ್ಲಾ, ಖರೆ ಮಾಜ್ಯಾ ಮಾನಾ ಅನಿ ಎಕ್ಲೊ ಯೆತಲೊ ಹಾಯ್ ತೊ ಮಾಜ್ಯಾನ್ಕಿ ಮೊಟೊ, ತೆಚ್ಯಾ ಪಾಯಾತ್ಲಿ ವ್ಹಾನಾ ಕಾಡುಕ್ ಸೈತ್ ಮಿಯಾ ಯೊಗ್ಯ್ ನ್ಹಯ್. ತೊ ತುಮ್ಕಾ ಪವಿತ್ರ್ ಆತ್ಮ್ಯಾನ್ ಅನಿ ಆಗಿನ್ ಬಾಲ್ತಿಮ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:11
29 ತಿಳಿವುಗಳ ಹೋಲಿಕೆ  

ಯೋಹಾನನು ಅವರೆಲ್ಲರಿಗೆ, “ನಾನಂತೂ ನಿಮಗೆ ನೀರಿನ ದೀಕ್ಷಾಸ್ನಾನ ಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮನಲ್ಲಿಯೂ ಮತ್ತು ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಮಾಡಿಸುವನು.


ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಮಷವನ್ನೂ ಮತ್ತು ಯೆರೂಸಲೇಮಿನ ರಕ್ತದ ಕಲೆಯನ್ನು ತೊಳೆದುಬಿಡುವನು.


ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು” ಎಂದು ಅಪ್ಪಣೆ ಕೊಟ್ಟನು.


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.


ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ ಕೊಡಲ್ಪಟ್ಟಿತು.


ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು,


ಅವನು ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ ಕರ್ತನ ಮುಂದೂತನಾಗಿ ಹೋಗುವನು. ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ, ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತನಿಗಾಗಿ ಜನರನ್ನು ಸಿದ್ಧಪಡಿಸುವನು” ಎಂದು ಹೇಳಿದನು.


‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದ ಮಾತು ಈತನ ವಿಷಯವಾಗಿಯೇ.


ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು.


ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ


ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”


ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ “‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು.


ಆತನು ಯೊರ್ದನ್ ಹೊಳೆಯ ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಜನರಿಗೆ, ನೀವು ಪಾಪ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿ ಹೇಳುತ್ತಿದ್ದನು.


ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.


ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು