Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 3:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯವು ಸಮೀಪಿಸಿತು,” ಎಂದು ಸಾರಿ ಹೇಳುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪರಲೋಕರಾಜ್ಯವು ಸಮೀಪವಾಯಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಯೂದಾಯದ ಅಡವಿಯಲ್ಲಿ ಸಾರಿ ಹೇಳುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಪರಲೋಕರಾಜ್ಯವು ಸಮೀಪಿಸಿತು. ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಅವನು ಬೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಸಾರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೊ “ತುಮ್ಚೆ ಪಾಪಾಚೆ ಜಿವನ್ ಸೊಡಾ, ಕಶ್ಯಾಕ್ ಮಟ್ಲ್ಯಾರ್ ಸರ್ಗಾಚೊ ರಾಜ್ ಜಗ್ಗೊಳ್ ಯೆಲಾ.” ಮನುನ್ ಸಾಂಗುಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 3:2
61 ತಿಳಿವುಗಳ ಹೋಲಿಕೆ  

ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು.


“ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.”


“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.


ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.


“ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.


ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.


‘ಪರಲೋಕ ರಾಜ್ಯವು ಸಮೀಪವಾಯಿತೆಂದು’ ಸಾರಿಹೇಳುತ್ತಾ ಹೋಗಿರಿ.


ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ


ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು.


ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ.


ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ.


ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.


ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.


ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.


ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.


ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ.


ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು.


“ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ.


ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.”


ನಿನೆವೆ ಪಟ್ಟಣದವರು ಯೋನನು ಸಾರಿದ ವಾಕ್ಯವನ್ನು ಕೇಳಿ ಮಾನಸಾಂತರಪಟ್ಟರು. ಇಗೋ, ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ. ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವರು.


ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.


ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.


ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.


ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.


ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ” ಎಂದು ಹೇಳಿದನು.


ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವುದಕ್ಕೂ ಅವರನ್ನು ಕಳುಹಿಸಿದನು.


ಅವರು ಹೊರಟು ಹೋಗಿ ಜನರಿಗೆ, “ನೀವು ನಿಮ್ಮ ಪಾಪಗಳನ್ನು ಬಿಟ್ಟು ಮಾನಸಾಂತರ ಹೊಂದಬೇಕು” ಎಂದು ಸಾರಿ ಹೇಳಿದರು.


ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು.


ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು.


“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.


ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು.


ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು, ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ.


ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.


ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.


ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.


ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ.


ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


“ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.


“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


“ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ.


ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.


ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.


ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು,


ಹಾಗೆಯೇ ಇವುಗಳಾಗುವುದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳಿರಿ.


ಅವನು ‘ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು’ ಅಂದನು.


“ದೇವರ ರಾಜ್ಯವು ಹೇಗೆಂದರೆ ದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು.


ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.


ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಇಸ್ರಾಯೇಲರಲ್ಲಿ ಅನೇಕರನ್ನು ಅವರ ದೇವರಾಗಿರುವ ಕರ್ತನ ಕಡೆಗೆ ತಿರುಗಿಸುವನು.


ಅದು ನಿನ್ನ ಕಣದಲ್ಲಿ ಕಾಳನ್ನು ಕೂಡಿಸಿ, ನಿನ್ನ ಬೆಳೆಯನ್ನು ಹೊತ್ತುಕೊಂಡು ಬರುವುದೆಂದು ಭರವಸವಿಡುವೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು