Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ತಿರುಗಾಡಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ, ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಯೇಸು ಸಭಾಮಂದಿರಗಳಲ್ಲಿ ಬೋಧಿಸಿದನು ಮತ್ತು ಪರಲೋಕರಾಜ್ಯದ ವಿಷಯವಾದ ಶುಭವಾರ್ತೆಯನ್ನು ಉಪದೇಶಿಸಿದನು. ಯೇಸು ಎಲ್ಲಾ ಜನರ ಕಾಯಿಲೆಗಳನ್ನು ಮತ್ತು ರೋಗಗಳನ್ನು ವಾಸಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಜೆಜು ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗಿತ್, ಸಿನಾಗೊಗಾತ್ನಿ ಶಿಕ್ವುನ್ಗೆತ್, ಅನಿ ಸಗ್ಳ್ಯಾ ಥರಿಚಿ ರೊಗಾ ಅಸಲ್ಲ್ಯಾಕ್ನಿ, ಅನಿ ಸಿಕ್ ಅಸಲ್ಲ್ಯಾಕ್ನಿ ಗುನ್ ಕರಿತ್ ಸಗ್ಳ್ಯಾ ಗಾಲಿಲಿಯಾ ಪ್ರಾಂತ್ಯಾತ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:23
46 ತಿಳಿವುಗಳ ಹೋಲಿಕೆ  

ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.


ಹೀಗಿರಲು ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ.


ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.


ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, “ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?


ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.


ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ, ಸಮಸ್ತ ರೋಗಗಳನ್ನು ವಾಸಿಮಾಡುವವನೂ,


ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.


ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ,


ಸಬ್ಬತ್ ದಿನ ಬಂದಾಗ ಆತನು ಅಲ್ಲಿಯ ಸಭಾಮಂದಿರದಲ್ಲಿ ಉಪದೇಶಮಾಡತೊಡಗಿದನು. ಅಲ್ಲಿ ನೆರದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಈತನಿಗೆ ಈ ಬೋಧನೆಯ ಮಾತುಗಳು ಎಲ್ಲಿಂದ ಬಂದಿತು? ಈತನು ಪಡೆದಿರುವ ಜ್ಞಾನವಾದರೂ ಎಂಥದ್ದು? ಈತನ ಕೈಯಿಂದ ಇಂತಹ ಅದ್ಭುತಕಾರ್ಯಗಳು ಆಗುವುದಾದರು ಹೇಗೆ?


ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.


ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರಕ್ಕೆ ಹೋದನು.


ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.


ಒಂದು ಸಬ್ಬತ್ ದಿನದಲ್ಲಿ ಯೇಸು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು.


ಜನರ ಗುಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಅಗತ್ಯವಿದ್ದವರನ್ನು ಗುಣಪಡಿಸಿದನು.


ಒಮ್ಮೆ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ಧರ್ಮೋಪದೇಶಕರೂ ಆತನ ಹತ್ತಿರ ಕುಳಿತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು.


ಅವರ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು.


ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.


ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,


“ನಾವು ಈ ಜನವನ್ನೆಲ್ಲಾ ಸಂಹರಿಸಿಬಿಡೋಣ” ಅಂದುಕೊಂಡಿದ್ದಾರೆ; ದೇಶದಲ್ಲಿರುವ ನಿನ್ನ ಎಲ್ಲಾ ಸಭಾಮಂದಿರಗಳನ್ನು ಸುಟ್ಟುಬಿಟ್ಟಿದ್ದಾರೆ.


ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು.


ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.


ಈ ವಿಷಯಗಳನ್ನು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶ ಮಾಡುವಾಗ ಹೇಳಿದನು.


ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.


ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು.


ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.


ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.


ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.”


ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರ ಮಾಡಿದನು. ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದುದ್ದರಿಂದ ಆತನಿಗೆ ಯೂದಾಯದಲ್ಲಿ ಸಂಚರಿಸಲು ಮನಸ್ಸಾಗಲಿಲ್ಲ.


ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು,


ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.


ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ, ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು.


ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಕಾಯಿಲೆ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು.


ಆದರೆ ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು” ಎಂದು ಹೇಳಿದನು.


“ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ.


ಯಾವ ಅಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು