Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆತನ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹಬ್ಬಿದ್ದರಿಂದ ಮೈಯಲ್ಲಿ ನೆಟ್ಟಗಿಲ್ಲದವರನ್ನು, ಅಂದರೆ ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:24
41 ತಿಳಿವುಗಳ ಹೋಲಿಕೆ  

“ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ.


“ಕರ್ತನೇ, ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ” ಎಂದು ಹೇಳಿದನು.


ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು, ಮತ್ತು ಜನರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ, ತಮ್ಮ ತಮ್ಮ ರೋಗರುಜಿನಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ, ಗುಂಪುಗುಂಪಾಗಿ ಬಂದು ಸೇರಿದರು.


ಇದು ಕುರೇನ್ಯನು ಸಿರಿಯಕ್ಕೆ ಅಧಿಪತಿಯಾಗಿದ್ದಾಗ ನಡೆದ ಮೊದಲನೆಯ ಜನಗಣತಿ.


ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.


ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.


ದೆವ್ವ ಹಿಡಿದ ಕುರುಡನೂ, ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು. ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.


ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;


ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು.


ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.


ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.


ಹೊರಟು ಸಿರಿಯ ಮತ್ತು ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.


ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.


ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲೆಲ್ಲಾ ಹಬ್ಬಿತು.


ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ,


ದಾವೀದನ ಕೀರ್ತಿಯು ಎಲ್ಲಾ ದೇಶಗಳಲ್ಲಿ ಹಬ್ಬಿತು. ಯೆಹೋವನು ಅವನಿಗೆ ಎಲ್ಲಾ ಜನಾಂಗಗಳೂ ಹೆದರಿ ನಡೆಯುವಂತೆ ಮಾಡಿದನು.


ಯೆಹೋವನ ನಾಮಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬೆದ ರಾಣಿಯು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಬಂದಳು.


ಅವನು‍ ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಣ ಎಲ್ಲಾ ಜನಾಂಗಗಳಲ್ಲಿ ಅವನ ಹೆಸರು ಸುಪ್ರಸಿದ್ಧವಾಯಿತು.


ಯೆಹೋವನು ಯೆಹೋಶುವನ ಸಂಗಡ ಇದ್ದುದರಿಂದ ಅವನ ಕೀರ್ತಿ ದೇಶದಲ್ಲೆಲ್ಲಾ ಹಬ್ಬಿತು.


ಇನ್ನು ಕೆಲವರು, “ಇವು ದೆವ್ವಹಿಡಿದವನ ಮಾತುಗಳಲ್ಲ, ದೆವ್ವವು ಕುರುಡನ ಕಣ್ಣುಗಳನ್ನು ತೆರೆಯಲು ಸಾಧ್ಯವೇ?” ಎಂದರು.


ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಈ ಸುದ್ದಿ ಆ ದೇಶದೊಳಗೆಲ್ಲಾ ಹಬ್ಬಿತು.


ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರೂರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ.


ಅನಂತರ ದಾವೀದನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.


ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ, ಗೋಮೇಧಿಕ ರತ್ನ, ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪು ಹರಳು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತಶಿಲೆ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿ ರಾಶಿಯಾಗಿ ಸಂಗ್ರಹಿಸಿದ್ದೇನೆ.


ಹಂದಿಗಳನ್ನು ಮೇಯಿಸುವವರು ಊರೊಳಕ್ಕೆ ಓಡಿಹೋಗಿ ಇದೆಲ್ಲವನ್ನು ದೆವ್ವಹಿಡಿದವರ ಸಂಗತಿ ಸಹಿತವಾಗಿ ತಿಳಿಸಲು;


ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.


ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ’ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ?


ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ವಿಪರೀತ ಜ್ವರದಿಂದ ಕಷ್ಟಪಡುತ್ತಿರಲಾಗಿ; ಆಕೆಯ ವಿಷಯದಲ್ಲಿ ಅಲಿದ್ದವರು ಆತನನ್ನು ಬೇಡಿಕೊಂಡರು.


ಆದರೆ ಪಾಪಗಳನ್ನು ಕ್ಷಮಿಸುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದು ಹೇಳಿದನು.


ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು.


ಈ ಸುದ್ದಿಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು.


ಇದಾದ, ನಂತರ ಆ ದ್ವೀಪದಲ್ಲಿದ್ದ ಉಳಿದ ರೋಗಿಗಳು, ಪೌಲನ ಬಳಿಗೆ ಬಂದು ಸ್ವಸ್ಥರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು