Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೇಸು, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು’ ಎಂದು ಬರೆದಿದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದಕ್ಕೆ ಯೇಸುಸ್ವಾಮಿ, “ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ, ‘ಮಾನವನು ಜೀವಿಸುವುದು ಆಹಾರದಿಂದ ಮಾತ್ರವಲ್ಲ; ದೇವರಾಡುವ ಪ್ರತಿಯೊಂದು ನುಡಿಯಿಂದ’,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮನುಷ್ಯನು ರೊಟ್ಟಿತಿಂದ ಮಾತ್ರದಿಂದ ಬದುಕುವದಿಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುವನು ಎಂದು ಬರೆದದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೇಸು ಅವನಿಗೆ, “‘ಮನುಷ್ಯನು ಬದುಕುವುದು ಕೇವಲ ರೊಟ್ಟಿಯಿಂದಲ್ಲ, ಮನುಷ್ಯನ ಜೀವಿತವು ದೇವರು ಹೇಳುವ ಪ್ರತಿಯೊಂದು ಮಾತನ್ನು ಅವಲಂಬಿಸಿಕೊಂಡಿದೆ’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂಬುದಾಗಿ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದಕ್ಕೆ ಯೇಸು, “ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾನೆ,’” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಖರೆ ಜೆಜುನ್, “ಪವಿತ್ರ್ ಪುಸ್ತಕ್ ಸಾಂಗ್ತಾ, ಮಾನುಸ್ ಖಾಲಿ ಭಾಕ್ರಿ ವೈನಾ ಎವ್ಡೆಚ್ ಜಿವನ್ ಕರಿನಾ, ಖರೆ ದೆವಾನ್ ಬೊಲಲ್ಲ್ಯಾ ಹರಿಎಕ್ ಗೊಸ್ಟಿಯಾಂಚ್ಯಾ ವೈನಾ ತೊ ಜಿವನ್ ಕರ್‍ತಾ.” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:4
26 ತಿಳಿವುಗಳ ಹೋಲಿಕೆ  

ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.


ಯೇಸು ಅವನಿಗೆ, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ’ ಎಂದು ಬರೆದದೆ” ಎಂದು ಉತ್ತರಕೊಟ್ಟನು.


ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.


ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.


ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ.


ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, “ಇದೇನಿರಬಹುದು?” ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೋಶೆ ಅವರಿಗೆ, “ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ.


ಅದಕ್ಕೆ ಯೇಸು, “‘ನಿನ್ನ ದೇವರಾಗಿರುವ ಕರ್ತನನ್ನು ಆರಾಧಿಸಿ, ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದದೆ” ಎಂದು ಉತ್ತರಕೊಟ್ಟನು.


ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.


ಆಗ ಮೋಶೆ, “ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನಿಮ್ಮ ಗುಣುಗುಟ್ಟುವಿಕೆಯು ಯೆಹೋವನಿಗೆ ಕೇಳಿಸಿತು. ನಾನು ಮತ್ತು ಆರೋನನು ಎಷ್ಟರವರು? ನಿಮ್ಮ ಗುಣುಗುಟ್ಟುವಿಕೆ ಯೆಹೋವನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ” ಎಂದನು.


ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.


ಅದಕ್ಕೆ ಯೇಸು, “ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬುದಾಗಿಯೂ ಬರೆದಿದೆ” ಅಂದನು.


ಅದಕ್ಕೆ ಆತನು, “‘ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದೆಂದು’ ಹೇಳಿದೆ” ಎಂದು ಉತ್ತರ ಕೊಟ್ಟನು.


ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ತಿಂಗಳಲ್ಲಿಯೇ ಐಗುಪ್ತ ದೇಶದಿಂದ ಹೊರಟು ಬಂದ ನೆನಪಿಗಾಗಿ ಇದನ್ನು ಆಚರಿಸಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಬರಿಗೈಯಲ್ಲಿ ನನ್ನ ಸನ್ನಿಧಿಗೆ ಯಾರು ಬರಬಾರದು.


ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ. ಬಾಯೊಳಗಿಂದ ಹೊರಗೆ ಬರುವಂಥ ಮಾತು ಮನುಷ್ಯನನ್ನು ಅಶುದ್ಧಗೊಳಿಸುವುದು” ಎಂದು ಹೇಳಿದನು.


ಆತನು ಮತ್ತೆ ಹೇಳಿದ್ದೇನೆಂದರೆ, “ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ;


ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು