Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದಕ್ಕೆ ಯೇಸು, “ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬುದಾಗಿಯೂ ಬರೆದಿದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದಕ್ಕೆ ಯೇಸು, “ ‘ನಿನ್ನ ದೇವರು ಸರ್ವೇಶ್ವರ; ನೀನು ಅವರನ್ನು ಪರೀಕ್ಷಿಸಬಾರದು’, ಎಂದೂ ಸಹ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬದಾಗಿ ಸಹ ಬರೆದದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅದಕ್ಕೆ ಯೇಸು, “‘ನಿನ್ನ ದೇವರಾದ ಪ್ರಭುವನ್ನು ನೀನು ಪರೀಕ್ಷಿಸಕೂಡದು’ ಎಂಬುದಾಗಿಯೂ ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದಕ್ಕೆ ಯೇಸು, “ ‘ನಿನ್ನ ದೇವರಾದ ಕರ್ತದೇವರನ್ನು ಪರೀಕ್ಷಿಸಬಾರದು’ ಎಂಬುದನ್ನು ಸಹ ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಜೆಜುನ್, “ಖರೆ ಪವಿತ್ರ್ ಪುಸ್ತಕ್, ಸರ್ವೆಸ್ವರಾಚಿ ತುಜ್ಯಾ ದೆವಾಚಿ ಪರಿಕ್ಷಾ ಕರುನಕೊ ಮನುನ್ಬಿ ಸಾಂಗ್ತಾ”, ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:7
21 ತಿಳಿವುಗಳ ಹೋಲಿಕೆ  

ನೀವು ಮಸ್ಸದಲ್ಲಿ ನಿಮ್ಮ ದೇವರಾದ ಯೆಹೋವನನ್ನು ಪರೀಕ್ಷಿಸಿದಂತೆ ಇನ್ನು ಮುಂದೆ ಮಾಡಬೇಡಿರಿ.


ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ.


ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಾಗ, ಸಂಶಯ ಮನಸ್ಸಿನಿಂದ ದೇವರನ್ನು ಪರೀಕ್ಷಿಸಿದರು.


ಆತನನ್ನು ಪದೇಪದೇ ಪರೀಕ್ಷಿಸಿ, ಇಸ್ರಾಯೇಲರ ಸದಮಲಸ್ವಾಮಿಯನ್ನು ಕೋಪಕ್ಕೆ ಗುರಿಮಾಡಿದರು.


ನಿಮ್ಮ ಹಿರಿಯರು ಮೊಂಡುತನದಿಂದ ನನ್ನನ್ನು ಪರೀಕ್ಷಿಸಿ, ನಲವತ್ತು ವರ್ಷ ನನ್ನ ಕೃತ್ಯಗಳನ್ನು ನೋಡಿದರು.


ಇಸ್ರಾಯೇಲರು, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ?” ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ, ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ಗದ್ದಲ ಮಾಡಿದ್ದರಿಂದ ಅದಕ್ಕೆ ಮೆರೀಬಾ ಎಂತಲೂ ಹೆಸರಿಟ್ಟನು.


ಆದಕಾರಣ ಜನರು ಮೋಶೆಯ ಮೇಲೆ ಗುಣುಗುಟ್ಟುತ್ತಾ, “ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು” ಎಂದು ಗದ್ದಲವೆಬ್ಬಿಸಲು, ಮೋಶೆಯು ಅವರಿಗೆ, “ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.


ಆಗ ಪೇತ್ರನು ಆಕೆಗೆ, “ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.


ಅರಣ್ಯದಲ್ಲಿ ಅತಿ ಆಶೆಗೊಂಡವರಾಗಿ, ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು.


ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು.


ಈಗ ಅಹಂಕಾರಿಗಳನ್ನು ಭಾಗ್ಯವಂತರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ” ಅಂದುಕೊಂಡಿದ್ದೀರಲ್ಲಾ.


ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು. ಆತನ ವಿಧಿಗಳನ್ನು ಕೈಗೊಳ್ಳದೆ,


ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ


ಯೇಸು, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು’ ಎಂದು ಬರೆದಿದೆ” ಅಂದನು.


ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.


ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.


ಯೇಸು ಅವರಿಗೆ, “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’


ಆತನಿಗೆ, “ಇವರು ಹೇಳುವುದನ್ನು ಕೇಳುತ್ತಿರುವೆಯಾ” ಎಂದು ಹೇಳಲು ಯೇಸು, “ಹೌದು, ಕೇಳುತ್ತಿದ್ದೇನೆ, ಆದರೆ ‘ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿರುವಿ’ ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?” ಎಂದು ಕೇಳಿದನು.


ಅದಕ್ಕೆ ಆತನು, “‘ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದೆಂದು’ ಹೇಳಿದೆ” ಎಂದು ಉತ್ತರ ಕೊಟ್ಟನು.


ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು