Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀತಿಯ ನಿವಿುತ್ತವಾಗಿ ಹಿಂಸೆಯನ್ನು ತಾಳಿಕೊಳ್ಳುವವರು ಧನ್ಯರು; ಪರಲೋಕರಾಜ್ಯವು ಅವರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀತಿಯ ನಿಮಿತ್ತ ಹಿಂಸೆಪಡುವವರು ಧನ್ಯರು. ಪರಲೋಕರಾಜ್ಯ ಅವರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀತಿಯ ನಿಮಿತ್ತವಾಗಿ ಹಿಂಸೆಗೊಳಗಾಗುವವರು ಧನ್ಯರು, ಪರಲೋಕ ರಾಜ್ಯವು ಅವರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ದೆವಾಕ್ ಕಾಯ್ ಪಾಜೆ ತೆ ಕರಲ್ಲ್ಯಾಸಾಟಿ ದುಸ್ರ್ಯಾನಿ ದಿಲ್ಲೊ ತರಾಸ್ ಸೊಸ್ತಲಿ ಲೊಕಾ ಕವ್ಡಿ ಸುಖಿ; ಸರ್‍ಗಾಚೊ ರಾಜ್ ತೆಂಚೊಚ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:10
30 ತಿಳಿವುಗಳ ಹೋಲಿಕೆ  

ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.


ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.


“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.


“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.


ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.


ನೀವು ಹೀಗಿರುವುದು ವಿರೋಧಿಗಳ ನಾಶನಕ್ಕೂ, ನಿಮ್ಮ ರಕ್ಷಣೆಗೂ ಒಂದು ಗುರುತಾಗಿದೆ. ಅದು ದೇವರಿಂದಾದ ಮುನ್ಸೂಚನೆಯಾಗಿದೆ.


ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.


ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ, ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು, ಅವೆಲ್ಲವುಗಳೊಳಗಿನಿಂದ ಕರ್ತನು ನನ್ನನ್ನು ಬಿಡಿಸಿದನು.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.


ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.


ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು.


ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ.


ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಕೆಡುಕುನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಅವನು ಯಾಕೆ ತಮ್ಮನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟದ್ದು ಮತ್ತು ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ.


ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.


ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು.


ಆದರೆ ಯೇಸು, “ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ” ಎಂದು ಹೇಳಿದನು.


ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, “ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.


ಆದುದರಿಂದ ನನ್ನ ತಂದೆಯು ನನಗೆ ರಾಜ್ಯವನ್ನು ನೇಮಿಸಿರುವ ಪ್ರಕಾರ ನಾನು ನಿಮಗೂ ನೇಮಿಸುತ್ತೇನೆ;


ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು