Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಕಟ್ಟಲ್ಪಟ್ಟಿರುವ ಊರು ಮರೆಯಾಗಿರಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಜಗತ್ತಿಗೆ ನೀವೇ ಜ್ಯೋತಿ. ಬೆಟ್ಟದ ಮೇಲಿನ ಪಟ್ಟಣವನ್ನು ಮುಚ್ಚಿಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಗುಡ್ಡದ ಮೇಲೆ ಕಟ್ಟಿರುವ ಊರು ಮರೆಯಾಗಿರಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಗುಡ್ಡದ ಮೇಲೆ ಕಟ್ಟಿದ ಪಟ್ಟಣ ಮರೆಯಾಗಿರಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ನೀವು ಲೋಕಕ್ಕೆ ಬೆಳಕಾಗಿದ್ದೀರಿ; ಬೆಟ್ಟದ ಮೇಲಿರುವ ಊರು ಮರೆಯಾಗಿರಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 “ತುಮಿ ಸಗ್ಳ್ಯಾ ಜಗಾಚ್ಯಾ ಲೊಕಾಕ್ನಿ ಉಜ್ವೊಡ್ ಅಸ್ಲ್ಯಾ ಬಾಸೆನ್. ಎಕ್ ಮಡ್ಡಿ ವರ್‍ತಿ ಭಾಂದಲ್ಲೆ ಮೊಟೆ ಗಾಂವ್ ನಿಪುನ್ ರ್‍ಹಾವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:14
16 ತಿಳಿವುಗಳ ಹೋಲಿಕೆ  

ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.


ನೀವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.


ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ” ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.


ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು?


ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳ ದೂತರು, ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.”


ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ” ಎಂದನು.


ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇದು ಯೆರೂಸಲೇಮ್; ಪಟ್ಟಣವನ್ನು ನಾನು ಜನಾಂಗಗಳ ಮಧ್ಯದಲ್ಲಿ ಸ್ಥಾಪಿಸಿದ್ದೇನೆ, ಅದರ ಸುತ್ತಲು ನಾನಾ ದೇಶಗಳಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು